
CHITRADURGA NEWS | 22 SEPTEMBER 2025
ಹೊಳಲ್ಕೆರೆ: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಕಾಡುಗೊಲ್ಲ ಎಂದು ಬರೆಸಿ, ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳ ಅನುಕೂಲ ಪಡೆದುಕೊಳ್ಳಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.
ಇದನ್ನೂ ಓದಿ: ಈ ಫೈಲ್ ಓಪನ್ ಮಾಡಿದ್ರೆ ನಿಮ್ಮ ಫೋನ್ ಹ್ಯಾಕ್ ಆಗುತ್ತೆ | ಎಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ

ತಾಲ್ಲೂಕಿನ ಹಳೆಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಹಿಂದುಳಿದ ಸಮಾಜ ನಿಮ್ಮದು. ಕಾಡುಗೊಲ್ಲ ಎಂದು ಬರೆಸಿದರೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗುವ ಅವಕಾಶವಿದೆ. ಇದರಿಂದ ಉದ್ಯೋಗದಲ್ಲಿ ಮೀಸಲಾತಿ ಜೊತೆಗೆ ಸಾಲ, ಮತ್ತಿತರೆ ಸೌಲತ್ತುಗಳು ನಿಮಗೆ ಸಿಗುತ್ತದೆ ಎನ್ನುವುದನ್ನು ಮನವರಿಕೆ ಮಾಡಿಕೊಡುವುದಕ್ಕಾಗಿ 493 ಹಳ್ಳಿಗಳನ್ನು ಬಿಟ್ಟು ಈ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿರುವ ಕಾಡುಗೊಲ್ಲ ಜನಾಂಗ ಶಿಕ್ಷಣದಿಂದ ವಂಚಿತವಾಗಿದೆ. ರಾಜ್ಯ ಸರ್ಕಾರ ಸಮೀಕ್ಷೆಯನ್ನು ಕೇಂದ್ರಕ್ಕೆ ಕಳಿಸಲಿದೆ. ಎಸ್.ಟಿ.ಗೆ ಸೇರಿಸಿದರೆ ಎಲ್ಲಾ ಬೆನಿಫಿಟ್‍ಗಳು ಸಿಗುತ್ತದೆ. ಹಾಗಾಗಿ ಕಾಡುಗೊಲ್ಲ ಎಂದು ಬರೆಸಿ ಎಂದು ಹೇಳಿದರು.
ಇದನ್ನೂ ಓದಿ: ಕಡ್ಡಾಯವಾಗಿ ಸರ್ಕಾರಿ ಕಚೇರಿಯಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸಲು ಸೂಚನೆ
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿಜಯಕುಮಾರ್, ಕ್ಷೇತ್ರಶಿಕ್ಷಣಾಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಯುವರಾಜ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರೋಜಮ್ಮ, ಲೋಕೇಶ್, ದಾಸಯ್ಯನಹಟ್ಟಿ ರಮೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಮೂರ್ತಿ, ಗಂಗಾಧರಪ್ಪ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರದೀಪ್‍ಕುಮಾರ್ ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
