
CHITRADURGA NEWS | 18 AUGUST 2025
ಚಿತ್ರದುರ್ಗ: ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಇಂದು (ಆಗಸ್ಟ್ 18 ಸೋಮವಾರ) ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ವರದಿ ಆಧರಿಸಿ ಅಪರ ಜಿಲ್ಲಾಧಿಕಾರಿಗಳ ಸಲಹೆ ಮೇರೆಗೆ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮಹಿಳೆ ಮೇಲೆ ಚಿರತೆ ದಾಳಿ | ಮೆಕ್ಕೆಜೋಳಕ್ಕೆ ಗೊಬ್ಬರ ಹಾಕುವಾಗ ಘಟನೆ
ನಿರಂತರ ಮಳೆ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ(ಖಾಸಗಿ)ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಮೇರೆಗೆ ರಜೆ ಘೋಷಣೆ ಮಾಡಲಾಗಿದೆ.
ಬಹುತೇಕ ಮಕ್ಕಳು ತಯಾರಾಗಿ ಶಾಲೆಗೆ ಹೊರಡುವ ವೇಳೆಗೆ ಆದೇಶ ಹೊರಬಿದ್ದಿದ್ದು, ಪೋಷಕರು, ಮಕ್ಕಳು ಹಾಗೂ ಶಾಲೆಗಳಿಗೆ ಗೊಂದಲ ಸೃಷ್ಟಿಯಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
