
CHITRADURGA NEWS | 20 JULY 2025
ಮೊಳಕಾಲ್ಮೂರು: ತಾಲೂಕಿನ ಜೆಬಿ ಹಳ್ಳಿಯ ಗೃಹ ರಕ್ಷಕ ದಳದ ಸಿಬ್ಬಂದಿಯೋರ್ವ ಮದುವೆಯಾಗಲು ಹೆಣ್ಣು ಸಿಗಲಿಲ್ಲವೆಂದು ಮನನೊಂದ ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: ದಿನ ಭವಿಷ್ಯ | ಜುಲೈ 20 | ಆಸ್ತಿ ವಿವಾದ, ದೀರ್ಘಾವಧಿ ಸಾಲದ ಒತ್ತಡ, ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ
ತಿರುಮಲ (31) ಮೃತ ರಾಂಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ತಿರುಮಲ ಹಲವು ವರ್ಷಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದು, ವಯಸ್ಸಾಗ್ತಿದೆ ಮದುವೆ ಮಾಡಿಕೊಳ್ಳಬೇಕು ಎನ್ನುವ ಚಿಂತೆಗೆ ಬಿದ್ದಿದ್ದರು. ಅಲ್ಲದೇ ಇತ್ತೀಚಿಗೆ ಮೂರು ಕಡೆ ಹೆಣ್ಣು ನೋಡಲು ತೆರಳಿದ್ದು, ಹೆಣ್ಣಿನ ಕಡೆಯವರಿಂದ ತಿರಸ್ಕಾರಗೊಂಡ ಪರಿಣಾಮ ಹೆಚ್ಚು ಮನನೊಂದಿದ್ದರು.
ಮದುವೆ ಬಗ್ಗೆಯೇ ತೀವ್ರ ಯೋಚಿಸುತ್ತಿದ್ದ ತಿರುಮಲ ಮನನೊಂದು, ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ: KEA ಸಾಮಾನ್ಯ ಪ್ರವೇಶಾತಿ ಪರೀಕ್ಷೆ | ಸೀಟು ಹಂಚಿಕೆ ಗೊಂದಲ ನೀವಾರಿಸುವಂತೆ ಎಬಿವಿಪಿ ಆಗ್ರಹ
ಈ ಸಂಬಂಧ ಮೃತನ ತಂದೆ ಸೋಮರೆಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
