ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

ಡಾ.ಜಿ.ಪರಮೇಶ್ವರ್

CHITRADURGA NEWS | 17 JUNE 2024
ಚಿತ್ರದುರ್ಗ:‌ ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾಗಿರುವ ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡುತ್ತಿದ್ದಾರೆ.

ನಗರದ ವಿಆರ್‌ಎಸ್‌ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಜೂನ್‌ 17 (ಸೋಮವಾರ) ರ ಮಧ್ಯಾಹ್ನ 12.30ಕ್ಕೆ ಆಗಮಿಸಲಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಪತ್ನಿ, ತಂದೆ, ತಾಯಿಗೆ ಸಾಂತ್ವನ ಹೇಳಲಿದ್ದಾರೆ.

ಕ್ಲಿಕ್ ಮಾಡಿ ಓದಿ: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿ | ರಂಭಾಪುರಿ ಶ್ರೀ ಒತ್ತಾಯ

ಚಿತ್ರದುರ್ಗ ನಗರದ ವಿಆರ್‌ಎಸ್‌ ಬಡಾವಣೆಯ ರೇಣುಕಾಸ್ವಾಮಿ ನಿವಾಸ

ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಹೊರಡುವ ಸಚಿವರು, ಮಧ್ಯಾಹ್ನ 12.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 1.30ರವರೆಗೂ ರೇಣುಕಾಸ್ವಾಮಿ ಮನೆಯಲ್ಲಿ ಇರಲಿದ್ದಾರೆ. ಬಳಿಕ ಮಧುಗಿರಿಯ ಚನ್ನೇನಹಳ್ಳಿ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿಐಪಿ ಭದ್ರತಾ ವಿಭಾಗದ ಸಿಐಓ ಎಚ್‌.ಜಗದೀಶ್‌ ಗೌಡ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version