
CHITRADURGA NEWS | 18 JUNE 2024
ಚಿತ್ರದುರ್ಗ: ನಟ ದರ್ಶನ್ ಮತ್ತು ಆತನ ಸಹಚರರಿಂದ ಹತ್ಯೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಜೂನ್ 18 (ಮಂಗಳವಾರ) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡುತ್ತಿದ್ದಾರೆ.
ನಗರದ ವಿಆರ್‌ಎಸ್ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಮಧ್ಯಾಹ್ನ 12.30ಕ್ಕೆ ಆಗಮಿಸಲಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಪತ್ನಿ, ತಂದೆ, ತಾಯಿಗೆ ಸಾಂತ್ವನ ಹೇಳಲಿದ್ದಾರೆ.
ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಹೊರಡುವ ಸಚಿವರು, ಮಧ್ಯಾಹ್ನ 12.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮಧುಗಿರಿಯ ಚನ್ನೇನಹಳ್ಳಿಗೆ ಭೇಟಿ ನೀಡಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿಐಪಿ ಭದ್ರತಾ ವಿಭಾಗದ ಸಿಐಓ ಎಚ್.ಜಗದೀಶ್ ಗೌಡ ತಿಳಿಸಿದ್ದಾರೆ.
ಸಚಿವರ ಚಿತ್ರದುರ್ಗ ಪ್ರವಾಸ ಜೂನ್ 17 ರಂದು ಅನಿವಾರ್ಯ ಕಾರಣಗಳಿಂದ ರದ್ದುಗೊಂಡಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
