ಮುಖ್ಯ ಸುದ್ದಿ
ಮಾದಾರ ಚನ್ನಯ್ಯ ಶ್ರೀಗಳಿಗೆ ಗೌರವ ಡಿ.ಲಿಟ್ | ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದಿಂದ ಪ್ರದಾನ

CHITRADURGA NEWS | 07 JUNE 2024
ಚಿತ್ರದುರ್ಗ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಶ್ರೀಗಳನ್ನು ಗೌರವ ಡಿ.ಲಿಟ್ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಜೂನ್ 14 ರಂದು ನಡೆಯಲಿರುವ 10 ಮತ್ತು 11ನೇ ದೀಕ್ಷಾಂತ ಘಟಿಕೋತ್ಸವದಲ್ಲಿ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‍ಚಂದ್ ಗೆಪ್ಲೋಟ್ ಅವರು ಶ್ರೀಗಳಿಗೆ 2021-22ನೇ ಸಾಲಿನ ಗೌರವ ಡಿ.ಲಿಟ್ ಪದವಿ ಪ್ರದಾನ ಮಾಡಲಿದ್ದಾರೆ.

ಇದನ್ನೂ ಓದಿ: ಗೋವಿಂದ ಕಾರಜೋಳ ಗೆಲುವಿಗೆ ಬಿಜೆಪಿ ನಾಯಕರು ಕೆಲಸ ಮಾಡಲಿಲ್ಲ | ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್, ಕುಲಪತಿಗಳಾದ ಡಾ.ಎಸ್.ಅಹಲ್ಯಾ, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಂಸ್ಕೃತ ವಿದ್ವಾಂಸರಾದ ಡಾ.ಹೆಚ್.ವಿ. ನಾಗರಾಜರಾವ್ ಭಾಗವಹಿಸಲಿದ್ದಾರೆ.
ಅಭಿನಂದನೆ ಸಲ್ಲಿಸಿದ ಮಠಾಧೀಶರು;
ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಡಿ.ಲಿಟ್ ಪುರಸ್ಕಾರಕ್ಕೆ ಭಾಜನರಾಗುತ್ತಿರುವ ಮಾದಾರ ಚನ್ನಯ್ಯ ಶ್ರೀಗಳಿಗೆ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶ್ರೀ ಬಸವಪ್ರಸಾದ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಶ್ರೀ ಸತ್ಯಕ್ಕ ತಾಯಿ ಶುಭಾಷಯ ಕೋರಿದ್ದಾರೆ.
