
CHITRADURGA NEWS | 15 JUNE 2024
ಚಿತ್ರದುರ್ಗ: ಕಾರು, ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಮತ್ತೆ 5 ಜನರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಶನಿವಾರ ಸಂಭವಿಸಿದೆ.
ಇದನ್ನೂ ಓದಿ: PHC ವೈದ್ಯಾಧಿಕಾರಿಗಳ ಸಭೆ | ಬಾಲ್ಯ ಗರ್ಭಧಾರಣೆ ತಡೆಯಲು ಸೂಚನೆ

ಚಿತ್ರದುರ್ಗದಿಂದ ದಾವಣಗೆರೆ ಕಡೆ ಪ್ರಯಾಣ ಮಾಡುತ್ತಿದ್ದ ಫಾರ್ಚುನರ್ ಕಾರು- ಲಾರಿ. ಚಲಿಸುತ್ತಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿ ಹಿಂದಿನಿಂದ ಲಾರಿಗೆ ಕಾರು ಡಿಕ್ಕಿಯಾಗಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ಮುಂದೆ ಲಾರಿಯ ಬಾಡಿಯೇ ಕಿತ್ತುಕೊಂಡು ಹೋಗಿದೆ. ಲಾರಿಯ ಚಾರ್ಸಿ(ಇಂಜಿನ್) ವರೆಗೆ ಕಿತ್ತು ಹೋಗಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಇದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ 8 ಜನ ಇದ್ದು 3 ಜನ ಮೃತಪಟ್ಟಿದ್ದು, ಇನ್ನೂ 5 ಜನರನ್ನು ದಾವಣಗೆರೆಯ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
