
CHITRADURGA NEWS | 13 JULY 2026
ಚಿತ್ರದುರ್ಗ: ಹೊಳಲ್ಕೆರೆ ಸಮೀಪದ ಕಣಿವೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಚಿತ್ರದುರ್ಗದ ಲೋಹಿತ್ ಪ್ರಸಾದ್ ಹಾಗೂ ಅವರ ಪತ್ನಿ ನಿತ್ಯಶ್ರೀ ಮೃತಪಟ್ಟಿದ್ದಾರೆ.
ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ರಾತ್ರಿ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ:ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ
ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಕಾರು ಚಾಲಕ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಳಲ್ಕೆರೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ:ಟಿಇಟಿ ಪರೀಕ್ಷೆ ರದ್ದುಪಡಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂಸದ ಗೋವಿಂದ ಕಾರಜೋಳಗೆ ಮನವಿ
ಮೃತ ಲೋಹಿತ್ ಪ್ರಸಾದ್ ಚಿತ್ರದುರ್ಗದ ಪ್ರಖ್ಯಾತ ಮಾರುತಿ ಗ್ಯಾಸ್ ವಿತರಕರಾದ ಪ್ರಭು ಅವರ ಪುತ್ರ ಹಾಗೂ ಸೊಸೆಯಾಗಿದ್ದಾರೆ.
ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಪ್ರಭು ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಸೂರನಹಳ್ಳಿಯ ಅವರ ತೋಟದಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

