
CHITRADURGA NEWS | 30 SEPTEMBER 2024
ಚಿತ್ರದುರ್ಗ: ತೋಟಗಾರಿಕೆ(Horticulture) ಇಲಾಖೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳಲ್ಲಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: Death news: ಸಾವಿನಲ್ಲೂ ಒಂದಾದ ದಂಪತಿ | ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ನಿಧನ
ತೋಟಗಾರಿಕೆ ಇಲಾಖೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ರಾಷ್ಟ್ರೀಯ ತೋಟಗಾರಿಕೆ ಮಿಷನ್), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ ಯೋಜನೆ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಈ ಮೇಲ್ಕಂಡ ಯೋಜನೆಗಳಿಗೆ ಆಯಾ ಯೋಜನೆಗಳಲ್ಲಿ ನಿಗಧಿಪಡಿಸಿದ ಮಾರ್ಗಸೂಚಿಯಂತೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಎಲ್ಲಾ ಯೋಜನೆಗಳಿಗೆ ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆಯದೇ ಇರುವ ಫಲಾನುಭವಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅತೀ ಸಣ್ಣ ರೈತರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಆದ್ಯತೆ ನೀಡಲಾಗುವುದು.
ಕ್ಲಿಕ್ ಮಾಡಿ ಓದಿ: VV Sagara: ವಿವಿ ಸಾಗರಕ್ಕೆ ಹೆಚ್ಚಿದ ಒಳಹರಿವು | ಇಲ್ಲಿದೆ ನೋಡಿ ನೀರಿನ ಮಟ್ಟ
ಅರ್ಜಿ ನಮೂನೆ, ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
