Connect with us

    Horticulture training: ಶಾಲಾ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

    Horticulture training

    ಮುಖ್ಯ ಸುದ್ದಿ

    Horticulture training: ಶಾಲಾ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

    CHITRADURGA NEWS | 08 AUGUST 2024
    ಚಿತ್ರದುರ್ಗ: ಹೆಚ್ಚಿನ ಪರಿಶ್ರಮ ಪಟ್ಟರೆ ಕೃಷಿ ಹಾಗೂ ತೋಟಗಾರಿಕೆಯನ್ನು ಲಾಭದಾಯಕವಾಗಿಸಬಹುದು. ನೌಕರಿಗಿಂತಲೂ ಹೆಚ್ಚು ಆದಾಯಗಳಿಕೆ ಮಾಡಲು ಸಾಧ್ಯವಿದೆ. ಜತೆಗೆ ಇದೊಂದು ದೇಶಸೇವೆಯೂ ಆಗಲಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರದ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ಗುರುವಾರ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ತೋಟಗಾರಿಕೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ಇಂದಿನ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಬೆಳೆ ಹಾಗೂ ರೈತರ ಶ್ರಮದ ಬಗ್ಗೆ ಮಾಹಿತಿ ಕೊರತೆ ಇದೆ’ ಎಂದರು.

    ‘ನಾವು ತಿನ್ನುವ ಆಹಾರ, ಹಣ್ಣು, ತರಕಾರಿ ಬೆಳೆಗಳನ್ನು ಯಾವ ರೀತಿಯಾಗಿ ಬೆಳೆಯುತ್ತಿದ್ದೇವೆ ಎಂಬುವುದರ ಕುರಿತು ಪ್ರಾಥಮಿಕ ಜ್ಞಾನ ಅತ್ಯವಶ್ಯಕವಾಗಿ ಬೇಕಾಗಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೋಟಗಾರಿಕೆ ಬಗ್ಗೆ ತರಬೇತಿ ನೀಡಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದೆ’ ಎಂದು ತಿಳಿಸಿದರು.

    ಇದನ್ನು ಓದಿ: ವಿದ್ಯಾರ್ಥಿ ನಿಲಯದ ವಾರ್ಡನ್‌ ಅಮಾನತು | ಜಿಪಂ ಸಿಇಒ ಆದೇಶ

    ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಪ್ಪ ಭೋಗಿ ಮಾತನಾಡಿ, ‘ತೋಟಗಾರಿಕೆ ಪಿತಾಮಹಾ ಡಾ.ಎಂ.ಎಚ್‌.ಮರಿಗೌಡರ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ದಿನ ಆಚರಿಸಲಾಗುತ್ತಿದೆ. ತೋಟಗಾರಿಕೆ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಕಿಚನ್ ಗಾರ್ಡನ್ ಮಾಡುವ ಬಗೆ, ಮನೆಯ ಅಕ್ಕಪಕ್ಕ ಹಣ್ಣಿನ ಗಿಡಗಳನ್ನು ಬೆಳೆಯುವ ಪದ್ಧತಿ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿ ನಂತರ ಶಾಲಾ ಮಕ್ಕಳಿಗೆ ವಿವಿಧ ಬಗೆಯ ತರಕಾರಿ ಬೆಳೆಗಳ ಬೀಜದ ಕಿಟ್‍ನ್ನು ವಿತರಣೆ ಮಾಡಲಾಗುವುದು’ ಎಂದರು.

    ಇದನ್ನು ಓದಿ: ಲಿಂಗೈಕ್ಯ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸ್ಮರಣೋತ್ಸವ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಿಶೇಷ ಲೇಖನ

    ‘ಮಾರುಕಟ್ಟೆಯಲ್ಲಿ ಸಿಗುವ ಹಣ್ಣು, ತರಕಾರಿಗಳು ಸಾಕಷ್ಟು ರಾಸಾಯನಿಕಗಳಿಂದ ಕೂಡಿದ್ದು, ಕೆಲವು ರಾಸಾಯನಿಕಗಳು ಆರೋಗ್ಯಕ್ಕೆ ಹಾನಿಕಾರಕವಾಗಿವೆ. ಹಾಗಾಗಿ ನಮ್ಮ ಮನೆಗೆ ಬೇಕಾದ ಹಣ್ಣು, ತರಕಾರಿಗಳನ್ನು ಬೆಳೆದು ಜನರು ಉತ್ತಮ ಆರೋಗ್ಯ, ಪೌಷ್ಠಿಕ ವೃದ್ಧಿ ಮಾಡುವ ಉದ್ದೇಶದಿಂದ ಶಾಲಾ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.
    ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ದೇವರಾಜ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್‌.ಜೆ.ಸೋಮಶೇಖರ್‌, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್‌,

    ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ನಗರಸಭೆ ಸದಸ್ಯ ವೆಂಕಟೇಶ್‌, ಕೆಡಿಪಿ ಸದಸ್ಯ ನಾಗರಾಜ್‌ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top