CHITRADURGA NEWS | 12 MARCH 2026
ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಡಿಜಿಟಲ್ ಜನಗಣತಿ ಕಾರ್ಯ | ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ
ತರಬೇತಿಗಾಗಿ ಒಟ್ಟು 15 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳನುಸಾರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಜಂಟಿ ನಿರ್ದೇಶಕರು ಚಿತ್ರದುರ್ಗ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಲ್ಲಿ 2026ರ ಮಾರ್ಚ್ 12 ರಿಂದ ಏಪ್ರಿಲ್ 13 ರವರೆಗೆ ಪಡೆಯಬಹುದು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಸಿಲಿಂಡರ್ ಕೊರತೆ ಇಲ್ಲಾ | ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 7022208303 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
