
CHITRADURGA NEWS | 26 APRIL 2025
ಚಿತ್ರದುರ್ಗ: ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಿಮ್ಮರಾಜು, ಲೋಕಾಯುಕ್ತರ ವಶದಲ್ಲೇ ಇದ್ದರು.

ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಇಳಿಕೆ ಕಂಡ ಅಡಿಕೆ ರೇಟ್
ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ಹಾಗೂ ಕಟ್ಟಡದ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಪಡೆಯುವಾಗ ಏ.21 ರಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದರು.
ಇಂದು ಎದೆ ನೋವು ಕಾಣಿಸಿಕೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಲೋಕಾಯುಕ್ತರ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ | ಲಂಚ ಸ್ವೀಕರಿಸುತ್ತಿದ್ದಾಗ ದಾಳಿ
ಮೊಮ್ಮಗನನ್ನು ಲೋಕಾಯುಕ್ತರು ಬಂಧಿಸಿದ ವಿಚಾರ ತಿಳಿದು ಎಸ್ ದಿನಗಳ ಹಿಂದೆ ಅವರ ಅಜ್ಜಿ ಮೃತಪಟ್ಟಿದ್ದರು.
ಈಗ ಅಧಿಕಾರಿ ತಿಮ್ಮರಾಜು ಕೂಡಾ ಮೃತಪಟ್ಟಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
