CHITRADURGA NEWS | 03 September 2026
ಚಿತ್ರದುರ್ಗ: ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಇಚ್ಛಿಸುವ ಪ್ರತಿಯೊಬ್ಬರಿಗೂ ಹೊಸಯಳನಾಡು ಕರ್ನಾಟಕ ಪಬ್ಲಿಕ್ ಶಾಲೆ ರಾಜ್ಯಕ್ಕೇ ಅತ್ಯುತ್ತಮ ಮಾದರಿಯಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸಲು ವಿಬಿ-ಜಿ ರಾಮ್ ಜಿ ಪೂರಕ | ಡಾ.ಎಸ್.ಆಕಾಶ್
ಹಿರಿಯೂರು ತಾಲೂಕಿನ ಹೊಸಯಳನಾಡು ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕೊಠಡಿಗಳು, ಪ್ರಾರ್ಥನಾ ಮಂದಿರ ಹಾಗೂ ಕುಟೀರಗಳ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸೌಲಭ್ಯ ನೀಡಿದರೆ ಸರ್ಕಾರಿ ಶಾಲೆಗೂ ಬರುತ್ತವೆ ಮಕ್ಕಳು, ಸಾಮಾನ್ಯವಾಗಿ ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆಯೇ ವರದಿಗಳನ್ನು ನೋಡುತ್ತೇವೆ. ಆದರೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿದರೆ ಸರ್ಕಾರಿ ಶಾಲೆಗಳಿಗೂ ಮಕ್ಕಳು ಬರುತ್ತಾರೆ ಎನ್ನುವುದಕ್ಕೆ ಹೊಸಯಳನಾಡು ಶಾಲೆಯೇ ಪ್ರತ್ಯಕ್ಷ ಸಾಕ್ಷಿಯಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರಸಿದ್ಧ ವಿದ್ವಾಂಸರು ಓದಿದ್ದು ಸರ್ಕಾರಿ ಶಾಲೆಗಳಲ್ಲೇ ಎಂಬುದನ್ನು ಇಂದಿನ ಮಕ್ಕಳು ಅರಿಯಬೇಕು. ಆಧುನಿಕ ಎಐ (AI) ಯುಗದಲ್ಲಿ ಗ್ರಾಮೀಣ ಶಾಲೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಶ್ರೀಗಳು ಕರೆ ನೀಡಿದರು. ಶಾಲೆಯ ಮಹಾಪೋಷಕರಾದ ನಾ.ತಿಪ್ಪೇಸ್ವಾಮಿ ಅವರ ತಂಡವು ಮಕ್ಕಳಿಂದ ಯಾವುದೇ ಶುಲ್ಕ ಪಡೆಯದೆ ಸೌಲಭ್ಯ ಕಲ್ಪಿಸಿರುವುದನ್ನು ಅವರು ಶ್ಲಾಘಿಸಿದರು.
ಇದನ್ನೂ ಓದಿ: ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಆರೋಪ | ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಭವಿಷ್ಯ ನಿರ್ಮಾಣಕ್ಕೆ ಅಡಿಪಾಯ: ರಾಜ್ಯಪಾಲರು
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಈ ನೂತನ ಕೊಠಡಿಗಳ ಉದ್ಘಾಟನೆಯ ಮೂಲಕ ಕರ್ನಾಟಕ ಹಾಗೂ ಭಾರತದ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಹಾಕಲಾಗಿದೆ. ಜ್ಞಾನದ ಜೊತೆಗೆ ವಿವೇಕ, ವಿಜ್ಞಾನದ ಜೊತೆಗೆ ಪರಂಪರೆಯನ್ನು ಕಲಿಯುವುದೇ ನಮ್ಮ ಶಿಕ್ಷಣದ ನೈಜ ಉದ್ದೇಶ. ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ದೇಶದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕ್ರಾಂತಿ ಆರಂಭವಾಗಿದೆ,” ಎಂದರು.
ಸರ್ಕಾರಿ ಶಾಲೆ ಎಲ್ಲರಿಗೂ ಸೇರಿದ ಆಸ್ತಿ: ನಾ.ತಿಪ್ಪೇಸ್ವಾಮಿ
ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಗಳು ಕೇವಲ ಬಡವರಿಗಷ್ಟೇ ಅಲ್ಲ, ಸಮಾಜದ ಎಲ್ಲರಿಗೂ ಸೇರಿದವು. 2014ರಲ್ಲಿ ಶಾಲೆಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದಾಗ ಈ ಶಾಲೆಗೆ ಕಾಯಕಲ್ಪ ನೀಡುವ ನಿರ್ಧಾರ ಮಾಡಿದೆ. ಇಂದು ಇ-ಲೈಬ್ರರಿ, ಕಂಪ್ಯೂಟರ್ ಲ್ಯಾಬ್ ಹಾಗೂ ವಿಜ್ಞಾನ ಪ್ರಯೋಗಾಲಯಗಳಂತಹ ಆಧುನಿಕ ತಂತ್ರಜ್ಞಾನ ಕಲ್ಪಿಸಿರುವುದರಿಂದ ನಗರ ಪ್ರದೇಶಗಳಿಂದಲೂ ಮಕ್ಕಳು ಈ ಶಾಲೆಗೆ ಬರುತ್ತಿದ್ದಾರೆ ಎಂದು ತಿಳಿಸಿದರು. ದಾನಿಗಳು ಹಾಗೂ ಬೆಂಗಳೂರಿನ ವೈದ್ಯರ ತಂಡದ ನೆರವನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.
25 ಕೋಟಿ ರೂ. ಅನುದಾನದಲ್ಲಿ ಕಾಯಕಲ್ಪ
ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಮಾತನಾಡಿ, ತಿಪ್ಪೇಸ್ವಾಮಿ ಅವರು ವಿವಿಧ ಸಂಸ್ಥೆಗಳಿಂದ ಸುಮಾರು ₹25 ಕೋಟಿಗೂ ಹೆಚ್ಚು ಅನುದಾನ ತಂದು ಈ ಶಾಲೆಯನ್ನು ರಾಜ್ಯಕ್ಕೇ ಮಾದರಿಯಾಗಿ ನಿರ್ಮಿಸಿದ್ದಾರೆ ಎಂದು ಶ್ಲಾಘಿಸಿದರು.
ಇದನ್ನೂ ಓದಿ: ಆಂಧ್ರ DCM ಪವನ್ಕಲ್ಯಾಣ್ ಜನ್ಮ ದಿನಾಚರಣೆ | ಆಡುಮಲ್ಲೇಶ್ವರದಲ್ಲಿ ಪ್ರಾಣಿ ದತ್ತು ಸ್ವೀಕಾರ
ಸಂಸದ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ತ್ರಿಭಾಷಾ ಶಿಕ್ಷಣದ ಸೌಲಭ್ಯ ಬಡ ಮಕ್ಕಳಿಗೂ ತಲುಪುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಚಿದಾನಂದ ಗೌಡ, ಜಿ.ಪಂ. ಸಿಇಒ ಡಾ. ಆಕಾಶ್, ಎಸ್ಪಿ ರಂಜಿತ್ ಕುಮಾರ್ ಬಂಡಾರು, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು, ಎಸ್ಡಿಎಂಸಿ ಅಧ್ಯಕ್ಷ ತಿಮ್ಮಶೆಟ್ಟಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

