
CHITRADURGA NEWS | 10 JULY 2026
ಚಿತ್ರದುರ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಿಸಿಯೂಟ ತಯಾರಕರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ದಿನ ಭವಿಷ್ಯ | ಜುಲೈ 11 | ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ಅಂಗನವಾಡಿ ನೌಕರರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಪ್ರವಾಸಿ ಮಂದಿರದಿಂದ ಹೊರಟ ನೂರಾರು ಕಾರ್ಯಕರ್ತೆಯರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗುತ್ತ ಜಿಲ್ಲಾಧಿಕಾರಿ ಕಚೇರಿ ಆವರಣದೊಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಗೇಟ್ ಹಾಕಿ ತಡೆದ ಪರಿಣಾಮ ಎರಡು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಯಲ್ಲಿಯೇ ಕುಳಿತು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಉಪಾಧ್ಯಕ್ಷೆ ನಿಂಗಮ್ಮ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕರು ಯಾವುದೇ ಜೀವನ ಭದ್ರತೆಯಿಲ್ಲದೆ ಕಡಿಮೆ ಗೌರವ ಧನಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಆಶ್ವಾಸನೆ ನೀಡಿದಂತೆ ಏಳು ಸಾವಿರ ರೂ.ಗಳ ವೇತನ ಹೆಚ್ಚಿಸಬೇಕು.
ಆರು ಗಂಟೆ ಕೆಲಸದ ಅವಧಿಯ ಆದೇಶ ಹೊರಡಿಸಿ ಆರೋಗ್ಯ ವಿಮೆ ಜಾರಿಗೊಳಿಸಬೇಕು. ಸಾದಿಲ್ವಾರು ಜಂಟಿ ಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ತಯಾರಕರಿಂದ ಎಸ್‍ಡಿಎಂಸಿ.ಗೆ ವರ್ಗಾವಣೆ ಮಾಡಿರುವುದನ್ನು ಹಿಂದಕ್ಕೆ ಪಡೆದು ಮೊದಲಿನಂತೆಯ ಖಾತೆ ಬದಲಾಯಿಸಬೇಕು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಜುಲೈ 16ರಂದು ಉದ್ಯೋಗ ಮೇಳ | 8ಕ್ಕೂ ಹೆಚ್ಚು ಖಾಸಗಿ ಕಂಪನಿ ಭಾಗಿ
ಕೆಪಿಎಸ್‍ಸಿ. ಶಾಲೆ, ಇಸ್ಕಾನ್, ಮಠ, ಇನ್ನಿತರೆ ಸಂಘ ಸಂಸ್ಥೆಗಳಿಗೆ ಬಿಸಿಯೂಟ ವಿತರಣೆಯ ಹೊಣೆ ವಹಿಸುವುದರಿಂದ ಬಿಸಿಯೂಟ ತಯಾರಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹಾಗಾಗಿ ಕೆಲಸದ ಭದ್ರತೆ ಒದಗಿಸಿ ನಿವೃತ್ತಿಯಾದವರಿಗೆ ಮಾಸಿಕ ಹತ್ತು ಸಾವಿರ ರೂ. ಪಿಂಚಣಿ ನೀಡುವಂತೆ ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ.ಎಂ.ಮಲಿಯಪ್ಪ ಮಾತನಾಡಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಎಲ್‍ಕೆಜಿ. ಯುಕೆಜಿ. ವಿಸ್ತರಣೆಯಾಗಬೇಕು. O2026 ಮಾರ್ಚ್-24 ರ ಸಭೆಯ ತೀರ್ಮಾನದಂತೆ ಹತ್ತು ಸಾವಿರ ಕೇಂದ್ರಗಳಿಗೆ ಅನುದಾನ ನೀಡಬೇಕು.
ಮೂರರಿಂದ ಆರು ವರ್ಷದ ಮಕ್ಕಳಿಗೆ ಸಮವಸ್ತ್ರ, ಪುಸ್ತಕಗಳು ಮತ್ತು ಆಟಿಕೆಗಳನ್ನು ಒದಗಿಸಬೇಕು. ಬಿಎಲ್‍ಓ, ಎಸ್‍ಐಆರ್. ಹಾಗೂ ಇತರೆ ಸಮೀಕ್ಷಾ ಕೆಲಸಗಳಿಂದ ಅಂಗನವಾಡಿ ನೌಕರರು ಹಾಗೂ ಬಿಸಿಯೂಟ ತಯಾರಕರನ್ನು ಮುಕ್ತಗೊಳಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ: SIR | ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 2.68 ಲಕ್ಷಕ್ಕೂ ಅಧಿಕ ಮತದಾರರ ಗಣತಿ ನಮೂನೆ ವಿತರಣೆ
ಪ್ರತಿಭಟನೆಯಲ್ಲಿ ಪಾರ್ವತಮ್ಮ, ಇಂದಿರಮ್ಮ, ವಿಜಯಮ್ಮ, ಬಿ.ಬೋರಮ್ಮ, ಅನುಸೂಯಮ್ಮ, ನಿರ್ಮಲಮ್ಮ, ಜೆ.ಎನ್.ಗಂಗಮ್ಮ, ಟಿ.ತಿಪ್ಪೇಸ್ವಾಮಿ, ಮಂಜುಳ, ಪುಟ್ಟಮ್ಮ, ಸಿ.ಜಯಮ್ಮ, ಪಾರ್ವತಮ್ಮ, ಕವಿತ, ರತ್ನಮ್ಮ, ರಾಜಮ್ಮ, ಮಂಜಮ್ಮ ಸೇರಿದಂತೆ ಬಿಸಿಯೂಟ ತಯಾರಕರು ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

