
CHITRADURGA NEWS | 16 MAY 2025
ಚಿತ್ರದುರ್ಗ: ಚಿತ್ರದುರ್ಗ ನಗರದ ಮೇಗಳಹಳ್ಳಿ ಬಳಿ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ನಗರ ಆಶ್ರಯ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಶೀಘ್ರ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಇದನ್ನೂ ಓದಿ: ಎರಡು ದಿನ ಶಾಂತಿಸಾಗರ (ಸೂಳೆಕೆರೆ) ನೀರು ಸರಬರಾಜು ಸ್ಥಗಿತ
ಚಿತ್ರದುರ್ಗ ನಗರದ ಮೇಗಲಹಳ್ಳಿ ರಿ. ಸರ್ವೆ ನಂ. 22 ರಲ್ಲಿನ 15 ಎಕರೆ 20 ಗುಂಟೆ ಜಮೀನಿನಲ್ಲಿ 1001 ಸಂಖ್ಯೆಯ ಜಿ+2 ಮಾದರಿಯ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿಗೆ ವೇಗ ನೀಡಿ, ಆದಷ್ಟು ಶೀಘ್ರ ಮನೆಗಳ ನಿರ್ಮಾಣ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಈಗಾಗಲೆ 714 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಎ.ಹೆಚ್.ಪಿ ಯೋಜನೆಯಡಿ 2022ನೇ ಸಾಲಿನಲ್ಲಿ ಗುತ್ತಿಗೆಗೆದಾರರಿಗೆ ಮನೆ ನಿರ್ಮಾಣ ಕೆಲಸದ ಆದೇಶ ನೀಡಲಾಗಿರುತ್ತದೆ. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮೇ.28 ರವರೆಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷಾ ಕಾರ್ಯ ಅವಧಿ ವಿಸ್ತರಣೆ
2026 ರ ಮಾರ್ಚ್ ಅಂತ್ಯದ ಒಳಗಾಗಿ ಎಲ್ಲ 1001 ಮನೆಗಳನ್ನು ಪೂರ್ಣಗೊಳಿಸುವುದಾಗಿ ಇದೇ ವೇಳೆ ಗುತ್ತಿಗೆದಾರರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತೆ ಎಂ. ರೇಣುಕಾ, ಗುತ್ತಿಗೆದಾರರು, ನಗರಸಭೆ ಸಿಬ್ಬಂದಿಗಳು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

