ಕ್ರೈಂ ಸುದ್ದಿ
ಮನೆಗೆ ಬೆಂಕಿ | ಲಕ್ಷಾಂತರ ಮೌಲ್ಯದ ಗೃಹ ಬಳಕೆ ವಸ್ತುಗಳು ಭಸ್ಮ

CHITRADURGA NEWS | 26 JANUARY 2024
ಚಿತ್ರದುರ್ಗ: ನಗರದ ಹೃದಯ ಭಾಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಕೂಗಳತೆ ದೂರದಲ್ಲಿಯೇ ಮನೆಯೊಂದಕ್ಕೆ ಬೆಂಕಿ ತಗುಲಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಶಿವಪ್ರಕಾಶ್ ಎಂಬುವವರಿಗೆ ಸೇರಿದ ಎರಡು ಅಂತಸ್ತಿನ ಮನೆಯಲ್ಲಿ ಈ ಅವಘಡ ನಡೆದಿದ್ದು, ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮನೆಯ ಒಳಗಿದ್ದ ಲಕ್ಷಾಂತರ ಮೌಲ್ಯದ ಗೃಹ ಬಳಕೆಯ ವಸ್ತುಗಳು ಭಸ್ಮವಾಗಿವೆ.
ಇದನ್ನೂ ಓದಿ: ಶಾಸಕರಾದ ಟಿ.ರಘುಮೂರ್ತಿ ಹಾಗೂ ಬಿ.ಜಿ.ಗೋವಿಂದಪ್ಪಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಇನ್ನೂ ಶಿವಪ್ರಕಾಶ್ ಕುಟುಂಬ ದೇವರ ದರ್ಶನಕ್ಕಾಗಿ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ಪುಣ್ಯ ಕ್ಷೇತ್ರಕ್ಕೆ ಹೋಗಿತ್ತು ಎನ್ನಲಾಗಿದೆ.
ಎರಡು ಹಂತಸ್ತಿನ ಮನೆಗೆ ಬೆಂಕಿ ತಗುಲಿದ ವಿಷಯ ತಿಳಿದು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಮನೆಯಲ್ಲಿದ್ದ ಸಿಲಿಂಡರ್‍ಗಳನ್ನು ಸುರಕ್ಷಿತವಾಗಿ ವಾಪಾಸು ಕರೆತರುವಲ್ಲಿ ಯಶಸ್ವಿಯಾಗಿದೆ. ಇದರಿಂದ ಭಾರೀ ಪ್ರಮಾಣದ ಅವಘಡ ತಪ್ಪಿದಂತಾಗಿದೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗದ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
