CHITRADURGA NEWS | 10 JANUARY 2026
ಹೊಳಲ್ಕೆರೆ: ಮುಂದಿನ ದಿನಗಳಲ್ಲಿ ಬಡವರಿಗೆ ಮನೆಗಳನ್ನು ಕಟ್ಟಿಸಿಕೊಡಲು ಆಲೋಚಿಸಿದ್ದು, ಒಂದು ಕೋಟಿ 25 ಲಕ್ಷ ರೂ.ಗಳನ್ನು ಖರ್ಚು ಮಾಡಿ ಸೈಟ್‍ಗಳನ್ನು ಮಾಡಿಸಿದ್ದೇನೆ. ಒಂದೊಂದು ಮನೆಗೆ ಏಳು ಲಕ್ಷ ರೂ.ಗಳನ್ನು ನೀಡುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು.

ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಸಂಸ್ಥೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
ಕೊಳಾಳ್ ಗ್ರಾಮದ ಹತ್ತಿರ ಒಂದು ಕೋಟಿ ರೂ.ವೆಚ್ಚದಲ್ಲಿ ಹೊಸಕೆರೆ ಕಟ್ಟೆ, ಗೋಕಟ್ಟೆ ಅಭಿವೃದ್ದಿ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಇಂಜಿನಿಯರ್ ವರದಿ ನೀಡಿದ ತಕ್ಷಣವೆ ಒಂದು ಕೋಟಿ ರೂ. ಹಾಕಿ ಟೆಂಡರ್ ಕರೆದು ಹದಿನೈದು ದಿನಗಳ ಹಿಂದೆಯೇ ಕಾಮಗಾರಿ ಆರಂಭಿಸಲು ಸೂಚಿಸಿದ್ದೆ. ಆದರೆ ನಾನೆ ಬಂದು ಪೂಜೆ ಮಾಡುವಂತೆ ಕೇಳಿಕೊಂಡಿದ್ದರಿಂದ ಬಂದಿದ್ದೇನೆ. ಬಡ ಮಕ್ಕಳ ಶಿಕ್ಷಣಕ್ಕಾಗಿ ಎರಡು ಶಾಲೆಗಳನ್ನು ಕಟ್ಟಿಸುತ್ತೇನೆ. ರಜೆ ಮುಗಿಸಿ ಮಕ್ಕಳು ಬರುವಷ್ಟರಲ್ಲಿ ಇನ್ನು ಎರಡು ತಿಂಗಳಲ್ಲಿ ಉದ್ಘಾಟನೆ ಮಾಡುತ್ತೇನೆ ಎಂದರು.
ಇದನ್ನೂ ಓದಿ: ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ.ದಾದಾಪೀರ್ ಆಯ್ಕೆ
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಪ್ರವೀಣ, ಜಯಪ್ರಕಾಶ್, ಕೃಷ್ಣಮೂರ್ತಿ, ಕೆಂಚಪ್ಪ, ರಾಮಾಂಜನೇಯ, ಸದಾನಂದ, ಚಂದ್ರಣ್ಣ, ಜಯಣ್ಣ, ರಾಜಪ್ಪ ಹಾಗೂ ಊರಿನ ಮುಖಂಡರುಗಳು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
