
CHITRADURGA NEWS | 20 MARCH 2024
ಚಿತ್ರದುರ್ಗ: ಮೀಟರ್ ಬಡ್ಡಿ ಲೆಕ್ಕದಲ್ಲಿ ಸಾಲ ನೀಡಿದ್ದ ಸಾಲಗಾರರ ಕಾಟಕ್ಕೆ ತಾಳಲಾರದೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಬಸವ ಲೇಔಟ್ ನಿವಾಸಿ ರಂಜಿತಾ (23) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಸಾಲ ಕೊಟ್ಟವರ ಕಾಟ ದಿನದಿಂದ ದಿನಕ್ಕೆ ಹೆಚ್ಚಾದ ಕಾರಣ ತೀವ್ರ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕ್ಲಿಕ್ ಮಾಡಿ ಓದಿ: https://chitradurganews.com/plying-squad-to-prevent-illegal-excise-duty

ರಂಜಿತಾ ಐದು ವರ್ಷಗಳ ಹಿಂದೆ ನೀರಾವರಿ ಇಲಾಖೆಯಲ್ಲಿ ಎಂಜಿನಿಯರ್ ಆಗಿದ್ದ ದರ್ಶನ್ ಬಾಲು ಎಂಬುವರನ್ನು ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಗಂಡು ಮಗು ಇದೆ. ಸರ್ಕಾರಿ ಕೆಲಸ ಇದ್ದರೂ ಸಹ ಖಾಸಗಿಯಾಗಿ ಮೀಟರ್ ಬಡ್ಡಿ ಲೆಕ್ಕದಲ್ಲಿ ಸುಮಾರು ₹1 ಕೋಟಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಕ್ಲಿಕ್ ಮಾಡಿ ಓದಿ: https://chitradurganews.com/code-of-conduct-vigilance-for-hatti-tippesan-fair/
ಸಾಲ ಕೊಟ್ಟವರು ಹಣಕ್ಕಾಗಿ ಮನೆಯ ಹತ್ತಿರ ಬಂದು ಪತಿ, ಪತ್ನಿ ಇಬ್ಬರನ್ನೂ ಪೀಡಿಸುತ್ತಿದ್ದರು. ಇದರಿಂದ ಮನನೊಂದು ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಪತ್ನಿ ಸಾವಿಗೆ ಸಾಲ ಕೊಟ್ಟವರೇ ಕಾರಣ’ ಎಂದು ಪತಿ ದರ್ಶನ್ ಬಾಲು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
