
CHITRADURGA | 30 OCTOBER 2025
ಚಿತ್ರದುರ್ಗ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಅ. 31 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿ ಕಚೇರಿಗೆ ವೈದ್ಯಕೀಯ ಕಾಲೇಜು ಸ್ಥಳಾಂತರ | ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಮ್ಮತಿ

ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ 01 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ಬಳಿಕ ನಗರದಲ್ಲಿನ ಮದಕರಿ ನಾಯಕ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡುವರು.
ನಂತರ ಚಿತ್ರದುರ್ಗ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ, ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30 ಗಂಟೆಗೆ ನಗರದ ಜಾಮಿಯಾ ಮಸೀದಿಗೆ ಭೇಟಿ ನೀಡುವರು.
ಇದನ್ನೂ ಓದಿ: ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ವಿನಯ್ ಅವಿರೋಧ ಆಯ್ಕೆ
ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಅನ್ವರ್ ಬಾಷಾ ಅವರ ನಿವಾಸಕ್ಕೆ ಭೇಟಿ ನೀಡಿ, ಸಂಜೆ 5.30 ಗಂಟೆಗೆ ವಿಜಯನಗರ ಜಿಲ್ಲೆ ಕೂಡ್ಲಿಗಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
