Connect with us

    ಹೊಳಲ್ಕೆರೆಯಲ್ಲಿ ಜನತಾ ದರ್ಶನ | ಎಷ್ಟು ಜನ ಅರ್ಜಿ ಸಲ್ಲಿಸಿದ್ರು | ಎಷ್ಟು ಅರ್ಜಿಗೆ ಪರಿಹಾರ ಸಿಕ್ತು | ಬಾಕಿ ಉಳಿದವೆಷ್ಟು..?

    ಹೊಳಲ್ಕೆರೆ

    ಹೊಳಲ್ಕೆರೆಯಲ್ಲಿ ಜನತಾ ದರ್ಶನ | ಎಷ್ಟು ಜನ ಅರ್ಜಿ ಸಲ್ಲಿಸಿದ್ರು | ಎಷ್ಟು ಅರ್ಜಿಗೆ ಪರಿಹಾರ ಸಿಕ್ತು | ಬಾಕಿ ಉಳಿದವೆಷ್ಟು..?

    ಚಿತ್ರದುರ್ಗ ನ್ಯೂಸ್.ಕಾಂ: ರಾಜ್ಯ ಸರ್ಕಾರ ರೂಪಿಸಿರುವ ಜನತಾ ದರ್ಶನ ಕಾರ್ಯಕ್ರಮ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಡೆಯುತ್ತಿದೆ.

    ಚಿತ್ರದುರ್ಗ ಜಿಲ್ಲೆಯಲ್ಲಿ ಈವರೆಗೆ 7 ಜನತಾ ದರ್ಶನ ನಡೆದಿದ್ದು, ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌಧದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಮ್ಮುಖದಲ್ಲಿ 8ನೇ ಜನತಾ ದರ್ಶನ ಕಾರ್ಯಕ್ರಮ ಜರುಗಿತು.

    ಇದನ್ನೂ ಓದಿ: ಹೊಸದುರ್ಗ ಬಳಿ ಶಾಲಾ ಮಕ್ಕಳಿದ್ದ ಬಸ್ ಪಲ್ಟಿ

    ಈ ಕಾರ್ಯಕ್ರಮಕ್ಕಾಗಿ ಜಿಲ್ಲೆ, ತಾಲೂಕಿನ ವಿವಿಧ ಮೂಲಕೆಗಳಿಂದ ಸಾವಿರಾರು ಜನ ತಮ್ಮ ಸಮಸ್ಯೆಗಳನ್ನು ಹೊತ್ತು ಹೊಳಲ್ಕೆರೆಗೆ ಆಗಮಿಸಿದ್ದರು.

    ಮಂಗಳವಾರ ಸಂಜೆವರೆಗೆ ಜನತಾ ದರ್ಶನದಲ್ಲಿ ಒಟ್ಟು 1585 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ 1286 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಯಿತು.

    ಇನ್ನೂ 299 ಅರ್ಜಿಗಳು ಇತ್ಯರ್ಥವಾಗಲು ಬಾಕಿ ಉಳಿದುಕೊಂಡಿವೆ. ಇದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 144 ಹಾಗೂ ವಿವಿಧ ಇಲಾಖೆಗಳಿಗೆ ಸೇರಿದ 155 ಅರ್ಜಿಗಳು ಬಾಕಿ ಇವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ ನೀಡಿದರು.

    ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಡಿ.ಸುಧಾಕರ್ ಮಾತನಾಡಿ, ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಸಾರ್ವಜನಿಕರ ಕುಂದು ಕೊರತೆ, ಸಮಸ್ಯೆಗಳ ಅರ್ಜಿಗಳನ್ನು ಒಂದು ತಿಂಗಳೊಳಗೆ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಇದನ್ನೂ ಓದಿ: ಅಪಘಾತದಲ್ಲಿ ಬೆಸ್ಕಾಂ ಪವರ್‍ಮೆನ್ ಮೃತ

    ಜನರಿಗೆ ಸೂಕ್ತ ಸ್ಪಂದನೆ ದೊರಕಬೇಕು. ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ಈಗಾಗಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.

    ಸಾರ್ವಜನಿಕರು ಪ್ರತಿನಿತ್ಯವೂ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಸರ್ಕಾರಿ ಕಚೇರಿಗಳಿಗೆ ಅಲೆದಾಟ ಮಾಡುವುದನ್ನು ತಪ್ಪಿಸಿ, ಜನರ ಬಳಿಗೇ ಅಧಿಕಾರಿಗಳು, ಜನಪ್ರತಿನಿಧಿಗಳು ತೆರಳಿ, ಜನರ ದೂರು ದುಮ್ಮಾನಗಳನ್ನು ಆಲಿಸಿ ಪರಿಹರಿಸಬೇಕೆಂಬುದು ನಮ್ಮ ಸರ್ಕಾರದ ಆಶಯವಾಗಿದೆ.ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ, ಜಿಲ್ಲೆಯಾದ್ಯಂತ ಜನತಾ ದರ್ಶನ ಕಾರ್ಯಕ್ರಮಗಳ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಸಚಿವರು ಹೇಳಿದರು.

    ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ, ಜನರ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ತಾಲ್ಲೂಕು ಹಂತದಲ್ಲಿ ಆಯೋಜಿಸಲು ಸೂಚನೆ ನೀಡಿದ್ದಾರೆ.

    ಜನರ ಮನೆ ಬಾಗಿಲಿಗೆ ತೆರಳಿ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶ ಜನತಾ ದರ್ಶನ ಕಾರ್ಯಕ್ರಮ ಹೊಂದಿದೆ. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಕೇಂದ್ರಗಳಿಗೆ ಅಲೆದಾಟ ಮಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಯಾವುದೇ ಸರ್ಕಾರವಿದ್ದರೂ ಸಾರ್ವಜನಿಕರ ಕಷ್ಟಗಳನ್ನು ಪರಿಹರಿಸಲು ಪ್ರಯತ್ನಿಸುತ್ತದೆ. ಹಿಂದಿನ ಸರ್ಕಾರದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಸಲಾಗುತ್ತಿತ್ತು, ಈಗಿನ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜನತಾದರ್ಶನ ಮೂಲಕ ಜನರನ್ನು ತಲುಪುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

    ಫಲಾನುಭವಿಗಳಿಗೆ ಸೌಲಭ್ಯ ವಿತರಣೆ:

    ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಾಯಿತು.

    ಇದನ್ನೂ ಓದಿ: ಹೊಸ ವರ್ಷದ ದಿನ ಕೋಟೆ, ಆಡುಮಲ್ಲೇಶ್ವರ, ಮುರುಘಾವನಕ್ಕೆ ಬಂದ ಪ್ರವಾಸಿಗರೆಷ್ಟು..?

    ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಹಾಗೂ ಅರ್ನಿಬಂಧಿತ ಅನುದಾನದಲ್ಲಿ 6 ಹಾಗೂ ಜಿಲ್ಲಾ ಖನಿಜ ಪತಿμÁ್ಠನ ಟ್ರಸ್ಟ್ ಅನುದಾನದಲ್ಲಿ 9 ಸೇರಿ ಒಟ್ಟು 15 ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ವಿವಾಹ ಪೆÇ್ರೀತ್ಸಾಹ ಧನ ಯೋಜನೆ ಅಡಿ 3 ದಂಪತಿಗಳಿಗೆ ತಲಾ ರೂ.50,000 ಗಳ ಚೆಕ್ ನೀಡಲಾಯಿತು.

    ಪಳಕೆಹಳ್ಳಿ ಗ್ರಾಮದ ಮಾರಮ್ಮ ಮಹಿಳಾ ಸ್ವ ಸಹಾಯ ಸಂಘ ಹಾಗೂ ಚಿಕ್ಕನಕಟ್ಟೆ ಗ್ರಾಮದ ಮಂಜುನಾಥ ಮಹಿಳಾ ಸ್ವ ಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.15 ಸಾವಿರದಂತೆ 2 ಸಂಘಗಳಿಗೆ ತಲಾ ರೂ. 2.50 ಲಕ್ಷ ಸಹಾಯಧನ ಮಂಜೂರಾತಿ ಪತ್ರವನ್ನು ಸಾಂಕೇತಿಕವಾಗಿ ನೀಡಲಾಯಿತು.

    ರೈತ ಆತ್ಮಹತ್ಯೆ ಪರಿಹಾರ, ಸುಕನ್ಯಾ ಸಮೃದ್ಧ ಯೋಜನೆ, ಪಿ.ಎಂ.ಆವಾಸ್ ಯೋಜನೆ, ಪೆÇೀಷಣಾ ಅಭಿಯಾನ್, ಪೌತಿ ಖಾತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮೂವರು ಗರ್ಭಿಣಿಯರಿಗೆ ವೇದಿಕೆ ಮೇಲೆ ಸೀಮಂತ ಕಾರ್ಯ ನೆರವೇರಿಸಲಾಯಿತು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಬೀಬಿ ಫಾತಿಮಾ, ತಾ.ಪಂ. ಇಒ ಶಿವಪ್ರಕಾಶ್ ಸೇರಿದಂತೆ ಹೊಳಲ್ಕೆರೆ ಪುರಸಭಾ ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಹೊಳಲ್ಕೆರೆ

    To Top