ಮುಖ್ಯ ಸುದ್ದಿ
ಭದ್ರಾ ಮೇಲ್ದಂಡೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಕೊಡುಗೆ ಎಷ್ಟು ?

CHITRADURGA NEWS | 16 FEBRUARY 2024
ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ ರಾಜ್ಯ ಬಜೆಟ್‍ನಲ್ಲಿ ಚಿತ್ರದುರ್ಗ ಜಿಲ್ಲೆಯ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನದ ನಿರೀಕ್ಷೆ ಹೊಂದಲಾಗಿತ್ತು. ಆದರೆ, ಮುಖ್ಯಮಂತ್ರಿಗಳು ಮತ್ತೆ ಕೇಂದ್ರವನ್ನು ಒತ್ತಾಯಿಸಲಾಗುವುದು ಎನ್ನುವ ಮೂಲಕ ಜಿಲ್ಲೆಯ ರೈತರಿಗೆ ನಿರಾಸೆ ಮೂಡಿಸಿದ್ದಾರೆ.
ಕಳೆದ ವರ್ಷ ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭದ್ರಾ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಘೋಷಣೆ ಮಾಡಿದ್ದರು.

ಇದನ್ನೂ ಓದಿ: ಮೊಬೈಲ್ ಒಟಿಪಿ ಕೇಳಿ 1.61 ಲಕ್ಷ ಎಗರಿಸಿದ ಸೈಬರ್ ಖದೀಮ
ಆದರೆ, ಈವರೆಗೆ ಕೇಂದ್ರದಿಂದ ಯೋಜನೆಗೆ ಒಂದು ರೂಪಾಯಿ ಕೂಡಾ ಬಿಡುಗಡೆ ಮಾಡಿಲ್ಲ. ಈ ಸಂಬಂಧ ಜಿಲ್ಲೆಯ ರೈತರು ಬಂದ್, ಮುಷ್ಕರ, ಸತ್ಯಾಗ್ರಹಗಳನ್ನು ನಿರಂತರವಾಗಿ ನಡೆಸುತ್ತಿದ್ದಾರೆ.

ಈ ನಡುವೆ ರಾಜ್ಯ ಸರ್ಕಾರದ ಬಜೆಟ್‍ನಲ್ಲಾದರೂ ಯೋಜನೆಗೆ ಅನುದಾನ ಘೋಷಿಸಿ ತ್ವರಿತವಾಗಿ ಮುಗಿಸುವ ಭರವಸೆ ಹೊಂದಲಾಗಿತ್ತು.
ಮುಖ್ಯಮಂತ್ರಿ ಭದ್ರಾ ಬಗ್ಗೆ ಬಜೆಟ್‍ನಲ್ಲಿ ಏನು ಹೇಳಿದರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಏನು ಹೇಳಿದರು ಪೂರ್ಣ ವಿವರ ಇಲ್ಲಿದೆ ನೋಡಿ.
ಇದನ್ನೂ ಓದಿ: ಹಿರಿಯೂರು ಜನತೆಗೆ ಗುಡ್ ನ್ಯೂಸ್
ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24ನೇ ಸಾಲಿನ ಆಯವ್ಯಯದಲ್ಲಿ 5300 ಕೋಟಿ ರೂ. ಅನುದಾನ ಘೋಷಿಸಲಾಗಿತ್ತು. ಆದರೆ, ಈವರೆಗೆ ಬಿಡುಗಡೆ ಆಗಿರುವುದಿಲ್ಲ.
ಹಾಗೆಯೇ ಹಿಂದಿನ ರಾಜ್ಯ ಸರ್ಕಾರ ತನ್ನ ಆಯವ್ಯಯ ಘೋಷಣೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾನ್ಯತೆ ನೀಡಲಾಗುತ್ತಿರುವುದರಿಂದ ಮಾನ್ಯ ಪ್ರಧಾನ ಮಂತ್ರಿಗಳಿಗೆ ಅಭಿನಂದನೆಗಳನ್ನು ತಿಳಿಸಲಾಗಿತ್ತು.
ಆದರೆ, ಈವರೆಗೆ ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರವು ಘೋಷಿಸದೇ ಇರುವುದರಿಂದ ಇದು ಹುಸಿಯಾದ ಘೋಷಣೆಯಾಗಿದೆ.
ಇದನ್ನೂ ಓದಿ: ರೈತರ ಜೊತೆ ಕುಳಿತು ಕಷ್ಟ ಸುಖ ಆಲಿಸಿದ ಎಸ್ಪಿ
ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯಡಿ ರಾಜ್ಯ ಸರ್ಕಾರವು 75 ಸಾವಿರ ಎಕರೆ ನೀರಾವರಿ ಕಲ್ಪಿಸಲು ಯೋಜಿಸಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
ಇದಿಷ್ಟು ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ವರದಿಯಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಹಗ್ಗ ಜಗ್ಗಾಟಕ್ಕೆ ಭದ್ರಾ ಮೇಲ್ದಂಡೆ ಯೋಜನೆ ವೇದಿಕೆಯಾಗಿದ್ದು, ಇದರಿಂದ ಬರದ ಹೊಡೆತಕ್ಕೆ ಸಿಲುಕಿರುವ ಜಿಲ್ಲೆಯ ಜನತೆ ಪರಿತಪಿಸುವಂತಾಗಿದೆ.
