
CHITRADURGA NEWS | 05 JANUARY 2026
ಚಿತ್ರದುರ್ಗ: ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ವಿದ್ಯಾರ್ಥಿಗಳು ಹಾಸ್ಟೆಲ್‍ನಲ್ಲಿ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ ಎಂಬುದಾಗಿ ತಿಳಿಸಿದ್ದು, ತಮ್ಮ ತಮ್ಮ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಮೊದಲು ಮೂಲ ಸೌಕರ್ಯ ಕಲ್ಪಿಸುವುದು ನಿಮ್ಮಗಳ ಜವಾಬ್ದಾರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ – ಮೈಸೂರು ರೈಲ್ವೇ ಮಾರ್ಗಕ್ಕೆ ಬೇಡಿಕೆ | ಸಾರಿಗೆ ಸಂಪರ್ಕಕ್ಕೆ ಕೋಟೆನಾಡು ಕೇಂದ್ರಬಿಂದು
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳು ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಸತಿನಿಲಯದ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯಗಳ ಸ್ವಚ್ಛತೆ, ಹಾಸ್ಟೆಲ್‍ನ ಸುತ್ತಮುತ್ತ, ವಿದ್ಯಾರ್ಥಿಗಳ ಕೊಠಡಿಗಳ ಸ್ವಚ್ಛತೆ, ಅಡುಗೆ ಮನೆಯಲ್ಲಿ ಸ್ವಚ್ಛತೆ ಅದೇ ರೀತಿ ರುಚಿ -ಶುಚಿ ಆಹಾರದ ಬಗ್ಗೆ ಸರಿಯಾಗಿ ಮೇಲ್ವಿಚಾರಣೆ ಮಾಡುವುದು ನಿಮ್ಮಗಳ ಆದ್ಯ ಕರ್ತವ್ಯವಾಗಿದ್ದು, ಈ ಕರ್ತವ್ಯ ನಿರ್ಲಕ್ಷಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಅದೇ ರೀತಿಯಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉತ್ತಮವಾದ ಬೋಧನಾ ವ್ಯವಸ್ಥೆಯನ್ನು ವಸತಿ ನಿಲಯಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಸೊಳ್ಳೆಗಳು ವಸತಿ ನಿಲಯಗಳ ಕೊಠಡಿಗಳಿಗೆ ಬಾರದಂತೆ ಮೆಸ್ಸುಗಳನ್ನು ಹಾಕಿಸಬೇಕು. ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜತೆಗೆ ಅಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮವಾದ ವಾತಾವರಣ ಕಲ್ಪಿಸಿ ಕೊಡಬೇಕೆಂದು ಸೂಚನೆ ನೀಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ ಜ.5| ಮತ್ತೆ ಏರಿಕೆ ಕಂಡ ಅಡಿಕೆ ಮಾರುಕಟ್ಟೆ
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎಸ್.ರಂಗಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ವಸತಿ ನಿಲಯದ ಮೇಲ್ವಿಚಾರಕರು ಮತ್ತು ಸಿಬ್ಬಂದಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
