CHITRADURGA NEWS | 05 FEBRUARY 2026
ಚಿತ್ರದುರ್ಗ: ಮತದಾರರ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಶೀಘ್ರದಲ್ಲಿ ಪ್ರಾರಂಭವಾಗುವುದರಿಂದ ಎಸ್ಐಆರ್ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಹೇಳಿದರು.
ಇದನ್ನೂ ಓದಿ: ಮೆಡಿಕಲ್ ಕಾಲೇಜು ನೇಮಕಾತಿ | ಮಧ್ಯವರ್ತಿಗಳಿಗೆ ಬಲಿಯಾಗಬೇಡಿ | ಡಾ.ಯುವರಾಜ್
ನಗರದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವೀಪ್ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಸದಸ್ಯರನ್ನೊಳಗೊಂಡ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಲಾ-ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಸಂಘ (ಇಎಲ್ಸಿ), ಮತಗಟ್ಟೆಗಳ ವ್ಯಾಪ್ತಿಯಲ್ಲಿ ಚುನಾವಣಾ ಜಾಗೃತಿ ಸಂಘ (ವಿಎಸಿ) ಹಾಗೂ ಎಲ್ಲ ಕಚೇರಿಗಳಲ್ಲಿ ಮತದಾರರ ಜಾಗೃತಿ ವೇದಿಕೆ (ವಿಎಎಫ್) ಗಳನ್ನು ಜಾಗೃತಗೊಳಿಸಿ, ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಮತದಾರರ ಸಾಕ್ಷರತಾ ಸಂಘಗಳ ಮಾಹಿತಿಯನ್ನು ಇಎಲ್ಸಿ ವೆಬ್ಸೈಟ್ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿ, ಸಂಘಗಳ ಕಾರ್ಯಚಟುವಟಿಕೆಗಳ ಕುರಿತು ಹಮ್ಮಿಕೊಳ್ಳಲಾಗುವ ಪ್ರತಿಯೊಂದು ಕಾರ್ಯಕ್ರಮಗಳನ್ನು ಅಪ್ಲೋಡ್ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಕನ್ನಡ ಮಾಧ್ಯಮ ಅಭ್ಯರ್ಥಿಗಳ ಮೀಸಲು ಶೇ.10ಕ್ಕೆ ಏರಿಸಲು ಶಿಫಾರಸ್ಸು | ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಚುನಾವಣಾ ತಹಶೀಲ್ದಾರ್ ಬೀಬಿ ಫಾತಿಮಾ, ಶಿರಸ್ತೆದಾರ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

