
CHITRADURGA NEWS | 04 MAY 2026
ಚಿತ್ರದುರ್ಗ: ದೇಶದ ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಪಶ್ಚಿಮಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬಿಜೆಪಿ ಕಾರ್ಯಕರ್ತರು ನಗರದ ಮದಕರಿ ನಾಯಕ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಭಾರತ್ ಮಾತೆ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಜೈಕಾರ ಹಾಕುತ್ತಾ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣಾ ಫಲಿತಾಂಶಗಳ ಕುರಿತು ಹರ್ಷ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಶ್ರಮಕ್ಕೆ ಗೆಲುವು ಸಿಕ್ಕಿದೆ.
ಬಂಗಾಳದಲ್ಲಿ ಈವರೆಗೆ ಹಿಂದೂ ವಿರೋಧಿ ಸರ್ಕಾರ ಅಸ್ತಿತ್ವದಲ್ಲಿತ್ತು. ಅಲ್ಲಿನ ಮತದಾರರು, ವಿಶೇಷವಾಗಿ ಹಿಂದೂಗಳು ಅನುಭವಿಸಿದ ದಬ್ಬಾಳಿಕೆ ಮತ್ತು ಸರ್ಕಾರದ ಆಡಳಿತ ವೈಖರಿಗೆ ಬೇಸತ್ತು ಈ ಬಾರಿ ಬಿಜೆಪಿಯನ್ನು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸಿದ್ದಾರೆ. ಅಲ್ಲಿನ ಆಡಳಿತಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಳೆದ ಎರಡು ಅವಧಿಯಲ್ಲಿ ನೀಡಿದ ಜನಪರ ಆಡಳಿತವನ್ನು ಮೆಚ್ಚಿ, ಜನರು ಈ ಬಾರಿಯೂ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಈ ಮೂಲಕ ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಿದೆ. ಪುದುಚೇರಿಯಲ್ಲಿ ಎನ್‍ಡಿಎ ಮೃತ್ರಿ ಕೂಟ ಅಧಿಕಾರಕ್ಕೆ ಬರಲಿದೆ. ಜಗತ್ತಿನ ಅತೀ ದೊಡ್ಡ ಪಕ್ಷವಾದ ಬಿಜೆಪಿ, ಕಾರ್ಯಕರ್ತರ ಗೆಲುವಿನ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ
ಮಾಜಿ ಶಾಸಕರಾದ ಎ.ಎಸ್.ಪಾಟೀಲ್, ರಾಜ್ಯ ಓಬಿಸಿ ಅಧ್ಯಕ್ಷ ರಘು ಕೌಟಿಲ್ಯ, ರಾಜ್ಯ ಉಪಾಧ್ಯಕ್ಷ ಆಶ್ವಿನಿ ಶಂಕರ್, ಜಿಲ್ಲಾ ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ ಗುಡಾರ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗೀರಿಶ್, ಮೋಹನ್ ಕುಮಾರ್ ವೆಂಕಟೇಶ್ ಯಾದವ್, ನಗರಾಧ್ಯಕ್ಷ ಲೋಕೇಶ್ ಜಿ.ಪಂ. ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ನಗರಸಭೆಯ ಮಾಜಿ ಸದಸ್ಯ ಸುರೇಶ್, ಹರೀಶ್, ರಾಜೇಶ್ ರೇಖಾ, ರಜನಿ,ಬಸಮ್ಮ, ರೈತವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಭಾರತಿ ಮಲ್ಲಿಕಾರ್ಜನ್, ಶ್ಯಾಮಲ ಶಿವಪ್ರಕಾಶ್, ಶೈಲಜ ರೆಡ್ಡಿ, ಭಾರ್ಗವಿ ದ್ರಾವಿಡ್ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
