
CHITRADURGA NEWS | 04 FEBRUARY 2024
ಚಿತ್ರದುರ್ಗ: ನ್ಯೂಸ್‍ಫಸ್ಟ್ ಸುದ್ದಿ ವಾಹಿನಿಯ ಕ್ರಿಯೇಟಿವ್ ಡೈರಕ್ಟರ್ ಸಿದ್ದೇಶ್ ಕುಮಾರ್ ಅವರ ತಂದೆ, ಹುಣಸೆಕಟ್ಟೆಯ ಕೃಷಿಕ ಪುಟ್ಟಪ್ಪ(88) ನಿಧನರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದ ಕಾರಣಕ್ಕೆ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಬಜೆಟ್ | ಸಾರ್ವಜನಿಕರ ಸಲಹೆಗಳ ಆಹ್ವಾನ
ಮೃತರು ಚಿತ್ರದುರ್ಗ ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದ ಕೃಷಿ ಕುಟುಂಬದವರು. ಇತ್ತೀಚಿಗೆ ಚಿತ್ರದುರ್ಗ ಜಯಲಕ್ಷ್ಮೀ ಬಡಾವಣೆಯಲ್ಲಿ ಮಗನ ಮನೆಯಲ್ಲಿ ನೆಲೆಸಿದ್ದರು.
ಮೃತರು ಪತ್ನಿ, ಪುತ್ರ ಸಿದ್ದೇಶ್ ಕುಮಾರ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣ ಸಮೀಪದ ರುದ್ರಭೂಮಿಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
