ಮುಖ್ಯ ಸುದ್ದಿ
TEMPLE: ವದ್ದಿಕೆರೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಹುಂಡಿ ಎಣಿಕೆ | 96.32 ಲಕ್ಷ ರೂ.ಸಂಗ್ರಹ
CHITRADURGA NEWS | 13 SEPTEMBER 2024
ಹಿರಿಯೂರು: ಭವ ರೋಗ ವೈದ್ಯ ಎಂದೇ ಹೆಸರಾಗಿರುವ ವದ್ದಿಕೆರೆಯ ಶ್ರೀ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ (TEMPLE) ಹುಂಡಿ ಎಣಿಕೆ ಕಾರ್ಯವನ್ನು ಶುಕ್ರವಾರ ನಡೆಸಿದ್ದು, 96,32,530 ರೂ. ಕಾಣಿಕೆ ಹಣ ಸಂಗ್ರಹವಾಗಿದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ | ಅವಿರೋಧವಾಗಿ ಆಯ್ಕೆ ಆಗ್ತಾರಾ ಡಿ.ಸುಧಾಕರ್
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಧಿಸೂಚಿತ ‘ಎ’ ಪ್ರವರ್ಗದ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ಯಾನೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ.ಕಾರ್ತಿಕ್, ತಹಶೀಲ್ದಾರ್ ರಾಜೇಶ್ ಕುಮಾರ್ ಸಮ್ಮುಖದಲ್ಲಿ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಗಳ ಹಣವನ್ನು ಎಣಿಕೆ ಮಾಡಲಾಗಿದೆ.
ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇವಸ್ಥಾನದ ಹೆಸರಿನಲ್ಲಿ ತೆರೆದಿರುವ ಕೆನರಾ ಬ್ಯಾಂಕ್ ಐಮಂಗಲ ಶಾಖೆ ಹಾಗೂ ಪ್ರಗತಿ ಕೃಷ್ಣ ಬ್ಯಾಂಕ್ ಯರಬಳ್ಳಿ ಶಾಖೆಯಲ್ಲಿ ಜಮೆ ಮಾಡಲಾಗಿದೆ.
ಇದನ್ನೂ ಓದಿ: ಗಣೇಶಮೂರ್ತಿ ವಿಸರ್ಜನೆಯಲ್ಲಿ ನಿಯಮ ಉಲ್ಲಂಘನೆ | ಡಿ.ಜೆ.ಸೌಂಡ್ ಸಿಸ್ಟಂ ವಶಕ್ಕೆ
ಕಳೆದ ವರ್ಷ ಅಂದರೆ 2023 ಸೆಪ್ಟೆಂಬರ್ 27ರಂದು ರಂದು ನಡೆದ ಎಣಿಕೆಯಲ್ಲಿ ಪ್ರಥಮ ಬಾರಿಗೆ 1,24,67,800 ರೂ. ದಾಖಲೆ ಮೊತ್ತ ಸಂಗ್ರಹವಾಗಿತ್ತು.
ಅಂದಿನ ಎಣಿಕೆಯ ಹುಂಡಿಯಲ್ಲಿ ವಿದೇಶಿ ಕರೆನ್ಸಿಗಳು ಸೇರಿದಂತೆ, ಭಕ್ತರು ಹರಕೆ ರೂಪದಲ್ಲಿ ಸಲ್ಲಿಸಿದ ಬಂಗಾರ ಮತ್ತು ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಸ್ವಾಮಿಗೆ ಸಮರ್ಪಿತವಾಗಿದ್ದವು.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ | ಐದು ಜನರ ಗೆಲುವು
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ.ಕಾರ್ತಿಕ್, ತಹಶೀಲ್ದಾರ್ ರಾಜೇಶ್ ಕುಮಾರ್. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಹಿರಿಯೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ವದ್ದಿಕೆರೆ ಗ್ರಾಮಸ್ಥರುಗಳು ಉಪಸ್ಥಿತರಿದ್ದರು.