ಮುಖ್ಯ ಸುದ್ದಿ
ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ನಾಯಕ ನಾನಲ್ಲ | ಬಿ.ವೈ.ವಿಜಯೇಂದ್ರ
CHITRADURGA NEWS | 06 FEBRUARY 2025
ಚಿತ್ರದುರ್ಗ: ಶ್ರೀರಾಮುಲು ಅವರು ಹಿರಿಯ ನಾಯಕರು. ಅವರೊಂದಿಗೆ ಪೈಪೋಟಿ ನಡೆಸುವಷ್ಟು ದೊಡ್ಡ ಮನುಷ್ಯ ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದ ವೇಳೆ ಪತ್ರಕರ್ತರ, ವಿಜಯೇಂದ್ರ ಅವರಿಗೆ, ಶ್ರೀರಾಮುಲು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಎಂದಿದ್ದಾರೆ. ನಿಮ್ಮೊಂದಿಗೆ ಪೈಪೋಟಿ ನಡೆಸುತ್ತಿದ್ದಾರಾ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: B.Ed ಫಲಿತಾಂಶ | SRS ಕಾಲೇಜಿಗೆ ಮೂರು ರ್ಯಾಂಕ್
ಇದಕ್ಕೆ ಪ್ರತಿಕ್ರಿಯಿಸಿದ, ವಿಜಯೇಂದ್ರ, ಶ್ರೀರಾಮುಲು ಅವರಿಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ ಎಂದರು.
ಶ್ರೀರಾಮುಲು ಅವರು, ಹಿರಿಯರಾದ ಗೋವಿಂದ ಕಾರಜೋಳ, ಯಡಿಯೂರಪ್ಪ, ಅನಂತಕುಮಾರ್ ಅವರ ಜೊತೆ ಜೊತೆಯಲ್ಲೇ ಪಕ್ಷದ ಸಂಘಟನೆ ಮಾಡಿದ್ದಾರೆ. ಹೀಗಾಗಿ ಅವರಿಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ 150 ಸ್ಥಾನ ಗೆಲ್ಲಿಸಿಕೊಂಡು ಬರುವುದಾಗಿ ಶ್ರಿರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲವನ್ನೂ ವರಿಷ್ಠರು ಗಮನಿಸುತ್ತಾರೆ.
ಇದನ್ನೂ ಓದಿ: ನರೇಗಾ ಹಬ್ಬದಲ್ಲಿ ಚಿತ್ರದುರ್ಗ ಜಿಲ್ಲೆಗೆ ಮೂರು ಪ್ರಶಸ್ತಿ
ಯಾರಿಗೆ ಕೊಟ್ಟರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಪಕ್ಷದ ಶಾಸಕರು, ಜಿಲ್ಲಾಧ್ಯಕ್ಷರ ಅಪೇಕ್ಷೆ ಏನಿದೆ ಎನ್ನುವುದನ್ನು ನೋಡಿಯೇ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದರು.
ಕಳೆದ ಒಂದು ವರ್ಷದಿಂದ ರಾಜ್ಯದ ಅಧ್ಯಕ್ಷನಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಈ ಹುದ್ದೆಯಲ್ಲಿ ಮುಂದುವರೆಯಬೇಕು ಎಂದು ಕಾರ್ಯಕರ್ತರ ಅಪೇಕ್ಷೆ ಇದೆ. ಈ ಬಗ್ಗೆ ಸದ್ಯದಲ್ಲೇ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಈ ವೇಳೆ ಸಂಸದ ಗೋವಿಂದ ಕಾರಜೋಳ, ಎಂಎಲ್ಸಿ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಪ್ರೊ.ಲಿಂಗಪ್ಪ, ಎಸ್.ಕೆ.ಬಸವರಾಜನ್, ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ, ಜಿಲ್ಲಾಧ್ಯಕ್ಷರಾದ ಎ.ಮುರುಳಿ, ಹನುಮಂತೇಗೌಡ, ಮಲ್ಲಿಕಾರ್ಜುನ್, ಸುರೇಶ್ ಸಿದ್ದಾಪುರ, ರಾಮದಾಸ್, ವೆಂಕಟೇಶ್ ಯಾದವ್, ಎಸ್.ಆರ್.ಗಿರೀಶ್, ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಸೇರಿದಂತೆ ಹಲವು ಮುಖಂಡರು ಇದ್ದರು.