ಲೋಕಸಮರ 2024
ನಾನು ಈಗ ಯಾವುದೇ ಪಕ್ಷದಲ್ಲಿ ಇಲ್ಲ | ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್

CHITRADURGA NEWS | 16 APRIL 2024
ಚಿತ್ರದುರ್ಗ: ನಾನು ಈಗ ಯಾವುದೇ ಪಕ್ಷದಲ್ಲಿ ಇಲ್ಲ. ನನಗೆ ಯಾವುದೇ ಬಂಧನವೂ ಇಲ್ಲ. ನಾನು ಸ್ವತಂತ್ರ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್ ತಿಳಿಸಿದ್ದಾರೆ.
‘ಕಳೆದ ವಿಧಾನ ಸಭೆ ಚುನಾವಣೆಯಿಂದ ನಾನು ಸಂಪೂರ್ಣ ಸ್ವತಂತ್ರನಾಗಿದ್ದೇನೆ. ನಾನು ಯಾರ ಪರವಾಗಿ, ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಚಿತ್ರದುರ್ಗದಲ್ಲಿ ಗೋವಿಂದ ಎಂ.ಕಾರಜೋಳ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.
ಕ್ಲಿಕ್ ಮಾಡಿ ಓದಿ: ಬಬ್ಬೂರು ಫಾರ್ಮ್ ಕಾಮಗಾರಿ | ಎಇಇ, ಲೆಕ್ಕ ಸಹಾಯಕ ಲೋಕಾಯುಕ್ತ ಬಲೆಗೆ

ಶಿಕಾರಿಪುರ, ಶಿವಮೊಗ್ಗ ಗ್ರಾಮಾಂತರ, ಸೊರಬ ವಿಧಾನಸಭಾ ಕ್ಷೇತ್ರಗಳಲ್ಲಿ 1.30 ಲಕ್ಷ ಭೋವಿ ಜನಾಂಗದವರಿದ್ದಾರೆ. ಇವರೆಲ್ಲರೂ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ. ಈಶ್ವರಪ್ಪ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ನಾನು ಸಹ ಪ್ರಚಾರ ನಡೆಸಿ ಗೆಲುವಿಗೆ ಶ್ರಮಿಸುತ್ತೇನೆ. ಈ ವಿಚಾರದಲ್ಲಿ ಕೆಲವರು ಅನಗತ್ಯ ಗೊಂದಲ ಸೃಷ್ಟಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಿಬಿಡುತ್ತಿದ್ದಾರೆ. ಆದರೆ ನನ್ನ ನಿರ್ಧಾರ ಎಂದಿಗೂ ಬದಲಾಗುವುದಿಲ್ಲ ಎಂದು ಹೇಳಿದರು.
