
CHITRADURGA NEWS | 20 DECEMBER 2024
ಚಿತ್ರದುರ್ಗ: ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪದಡಿ ಪೊಲೀಸರು ನಡೆಸಿಕೊಂಡ ರೀತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.
ಇದರ ಪರಿಣಾಮ ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ.ರವಿ ಹೋಗುವ ಮಾರ್ಗದುದ್ದಕ್ಕೂ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ನಿಂತು ಸ್ವಾಗತಿಸಿ, ಹೂಮಾಲೆ ಹಾಕಿ ಧೈರ್ಯ ತುಂಬುತ್ತಿದ್ದಾರೆ.

ಇದನ್ನೂ ಓದಿ: ಅಡಿಕೆ ಧಾರಣೆ | ಸ್ಥಿರತೆ ಕಂಡುಕೊಂಡ ಅಡಿಕೆ ಮಾರುಕಟ್ಟೆ
ರಾತ್ರಿ 9.15ರ ವೇಳೆಗೆ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಬಳಿ ಜಿಲ್ಲೆಯ ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಸಿ.ಟಿ.ರವಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರ ಘೋಷಣೆ ಕೂಗಿದರು.
ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಬಿಜೆಪಿ ಭಾವುಟ ಹಿಡಿದು ಸಿ.ಟಿ.ರವಿ ಬಳಿ ತೆರಳಿ ಹಸ್ತಲಾಘವ ನೀಡಿ ಧೈರ್ಯ ತುಂಬಿದರು.
ಇದನ್ನೂ ಓದಿ: CT ರವಿ ಮೇಲೆ ಹಲ್ಲೆ | ಇದು ಹೇಡಿಗಳ ಕೃತ್ಯ | BJP ವಕ್ತಾರ ನಾಗರಾಜ್ ಬೇದ್ರೆ
ಈ ವೇಳೆ ಕಾರಿನಲ್ಲೇ ಎದ್ದು ನಿಂತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿ.ಟಿ.ರವಿ, ಕಷ್ಟ ಕಾಲದಲ್ಲಿ ಜೊತೆಗೆ ನಿಂತು ಅಖಂಡ ಪ್ರೀತಿ ತೊರಿಸಿದ ಬಿಜೆಪಿ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ. ಮುಂದೆ ನಿಮ್ಮ ಕಷ್ಟ ಕಾಲದಲ್ಲಿ ಜೊತೆಗಿದ್ದು, ಈ ಋಣ ತೀರಿಸುತ್ತೇನೆ ಎಂದರು.
ಸಿ.ಟಿ.ರವಿ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಇದ್ದರು.
ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್, ಸಂಪತ್‍ಕುಮಾರ್, ನವೀನ್ ಚಾಲುಕ್ಯ, ವಿಶ್ವನಾಥ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
