CHITRADURGA NEWS | 04 OCTOBER 2025
ಹೊಳಲ್ಕೆರೆ: ಅಧಿಕಾರ ಎಲ್ಲಿಯವರೆಗೂ ಇರುತ್ತದೋ ಅಲ್ಲಿತನಕ ಜನಸೇವೆಯಲ್ಲಿ ತೊಡಗಿರುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಸರ್ಕಾರದಿಂದ ನಮ್ಮ ಕ್ಲಿನಿಕ್ ಪ್ರಾರಂಭ | ಸದುಪಯೋಗಪಡಿಸಿಕೊಳ್ಳಿ | ಡಾ.ಬಿ.ವಿ.ಗಿರೀಶ್
ತಾಲ್ಲೂಕಿನ ಮುತ್ತುಗದೂರು ಗ್ರಾಮದಲ್ಲಿ 4.10 ಕೋಟಿ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ಮತ್ತು ಬಸ್‍ನಿಲ್ದಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಹೊಳಲ್ಕೆರೆ ತಾಲ್ಲೂಕಿನಾದ್ಯಂತ ಚೆಕ್‍ಡ್ಯಾಂ, ಸಿ.ಸಿ.ರಸ್ತೆ, ಕೆರೆಕಟ್ಟೆಗಳನ್ನು ನಿರ್ಮಿಸಿ ಶಾಲಾ-ಕಾಲೇಜುಗಳನ್ನು ಕಟ್ಟಿಸಿದ್ದೇನೆ. ಸರ್ಕಾರದಲ್ಲಿ ನಾನು ಯಾವ ಬೇಡಿಕೆಯಿಟ್ಟರು ಐ.ಎ.ಎಸ್. ಅಧಿಕಾರಿಗಳು ಸ್ಪಂದಿಸಿ ಕೆಲಸ ಮಾಡುತ್ತಾರೆ. ಪ್ರತಿನಿತ್ಯವು ಒಂದಲ್ಲ ಒಂದು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿರುತ್ತವೆ. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ತಿಳಿದು ಕಷ್ಟ-ಸುಖದಲ್ಲಿ ಭಾಗಿಯಾಗುತ್ತೇನೆಂದರು.
ರೈತರಿಗೆ ವಿದ್ಯುತ್ ಸಮಸ್ಯೆಯಾಗಬಾರದೆಂದು ಹದಿನೇಳು ಕಡೆ ವಿದ್ಯುತ್ ಪವರ್‍ಸ್ಟೇಷನ್ ಕಟ್ಟಿಸಿದ್ದೇನೆ. ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ ಹದಿಮೂರುವರೆ ಎಕರೆ ಜಾಗದಲ್ಲಿ ಐದುನೂರು ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದೆ. ಜೋಗ್‍ಫಾಲ್ಸ್‍ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಪೂರೈಕೆಯಾಗಲಿದೆ.
ಇದರಿಂದ ಇನ್ನು ಐವತ್ತು ಅರವತ್ತು ವರ್ಷಗಳ ಕಾಲ ರೈತರಿಗೆ ವಿದ್ಯುತ್ ತೊಂದರೆ ಕಾಡುವುದಿಲ್ಲ. 367 ಕೋಟಿ ರೂ.ಗಳನ್ನು ಖರ್ಚು ಮಾಡಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸಲಾಗುವುದು. 186 ಹೊಸ ಶಾಲೆಗಳನ್ನು ಕಟ್ಟಿಸಿದ್ದೇನೆಂದು ತಿಳಿಸಿದರು.
ಇದನ್ನೂ ಓದಿ: ಕಾರು ಅಪಘಾತ | ಮಗು ಸೇರಿ ಮೂವರು ಸಾವು
ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿದೇವಿ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಎಂ.ಕೆ.ರುದ್ರಣ್ಣ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಿವಕುಮಾರ್, ನಟರಾಜ್, ಪ್ರಭು, ಮಂಜುನಾಥ, ಶಿವಕುಮಾರ್ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
