ಮುಖ್ಯ ಸುದ್ದಿ
ಜಿಲ್ಲೆ ಅಭಿವೃದ್ಧಿಗೆ ಶ್ರಮಿಸುತ್ತೇನೆ | ಗೋವಿಂದ ಕಾರಜೋಳ

CHITRADURGA NEWS | 04 JUNE 2024
ಚಿತ್ರದುರ್ಗ: ಎಲ್ಲರ ಸಲಹೆ ಸೂಚನೆ ಪಡೆದು ಜಿಲ್ಲೆ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯದ ನಗೆ ಬೀರಿದ ನೂತನ ಸಂಸದ ಗೋವಿಂದ ಕಾರಜೋಳ ತಿಳಿಸಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದ ಮತ ಎಣಿಕೆ ಕೇಂದ್ರದಲ್ಲಿ ಫಲಿತಾಂಶ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ನಾಯಕರು ನಿರ್ಧಾರ ಮಾಡಿ ಅಭ್ಯರ್ಥಿ ಮಾಡಿದ್ದರು. ನನಗೆ ಸಮಯ ಇರಲಿಲ್ಲ ನಾಮಪತ್ರ ಸಲ್ಲಿಕೆಗೆ ಮಾತ್ರ ಕ್ಷೇತ್ರಕ್ಕೆ ಬಂದೆ. ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ಗೆಲ್ಲಿಸಿದ್ದಾರೆ’ ಎಂದರು.
ಕ್ಲಿಕ್ ಮಾಡಿ ಓದಿ: ಕೋಟೆನಾಡಿನಲ್ಲಿ ಅರಳಿದ ಕಮಲ | ಗೆಲುವಿನ ಜಯಭೇರಿ ಬಾರಿಸಿದ ಗೋವಿಂದ ಕಾರಜೋಳ

‘ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ದೇಶದ ಜನರ ಆಶಯ ಇತ್ತು. ಮೋದಿಯನ್ನು ಮೆಚ್ಚಿ ಮೂರನೇ ಬಾರಿಗೆ ಬಹುಮತ ಕೊಟ್ಟಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ, ರಾಜ್ಯ ನಾಯಕರಿಗೆ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.
‘ಜನರ ಆಸೆ ಇದು ಜಿಲ್ಲೆಯ ಅಭಿವೃದ್ದಿ ಆಗಬೇಕು ಅಂತ. ಬೇಕು ಬೇಡಿಕೆಗಳ ಅರಿತು ಕೇಂದ್ರದಿಂದ ಏನು ಆಗಬೇಕು ಅದನ್ನು ಮಾಡುತ್ತೇನೆ. ಜಿಲ್ಲೆಗೆ ಹೊಸ ಮುಖ ಆಗಿದ್ದರು ಸಹ ವಿಶ್ವಾಸ ಇಟ್ಟು ಆಯ್ಕೆ ಮಾಡಿದ್ದಾರೆ. ಜಿಲ್ಲೆಯಲ್ಲಿ ನನಗೆ ಸಾಕಷ್ಟು ವಿರೋಧ ಇರಲಿಲ್ಲ. ಪಕ್ಷದ ಅಧ್ಯಕ್ಷರು ಎಲ್ಲರೂ ಸಹಕಾರ ನೀಡಿದರು’ ಎಂದರು.
