CHITRADURGA NEWS | 03 AUGUST 2025
ಹೊಸದುರ್ಗ: ಮಕ್ಕಳ ಕಲಿಕಾ ಸಮಸ್ಯೆಗಳನ್ನು ಗುರುತಿಸಿ ಮಾರ್ಗದರ್ಶನ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಮೋಸಿನ್ ಹೇಳಿದರು.
ಇದನ್ನೂ ಓದಿ: 1 ಕೋಟಿ ವೆಚ್ಚದಲ್ಲಿ ಸರ್ಕಾರಿ ಶಾಲೆ ನವೀಕರಣ | ಹಳೇ ವಿದ್ಯಾರ್ಥಿಗಳ ಮಹತ್ಕಾರ್ಯ
ಪಟ್ಟಣದ ಬಿ.ಆರ್.ಸಿ ಕಚೇರಿಯಲ್ಲಿ ಶಿಕ್ಷಕರ ದಿನಚರಿ ನಿರ್ವಹಣೆ ಮತ್ತು ತಂಬಾಕು ಮುಕ್ತ ಜೀವನ ಶೈಲಿಯಿಂದ ಆರೋಗ್ಯ ಜಾಗೃತಿ ಕುರಿತು ಸಿ.ಆರ್.ಪಿಗಳಿಗೆ ಶನಿವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಸಿ.ಆರ್.ಪಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿ ಮಗುವಿನ ಕಲಿಕಾ ಮಟ್ಟವನ್ನು ಎಲ್ಲ ವಿಷಯಗಳಲ್ಲಿ ಗುರುತಿಸಬೇಕು. ಕಲಿಕಾ ಸಾಮರ್ಥ್ಯದಲ್ಲಿ ಹಿಂದುಳಿದಿರುವ ಮಕ್ಕಳಲ್ಲಿ ಓದು, ಬರಹ ಮತ್ತು ಸಂಖ್ಯಾಜ್ಞಾನ ಸಾಮರ್ಥ್ಯ ಪರಿಣಾಮಕಾರಿಯಾಗಿ ಬೆಳೆಸಲು ಶಿಕ್ಷಕರಿಗೆ ಅಗತ್ಯ ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.
ಚಿತ್ರದುರ್ಗ ಡಯಟ್‌ನ ಎನ್‌ಪಿಇಪಿ ಜಿಲ್ಲಾ ನೋಡಲ್ ಅಧಿಕಾರಿ ಎಸ್.ಬಸವರಾಜು ತಂಬಾಕು ಮುಕ್ತ ಜೀವನ ಶೈಲಿಯಿಂದ ಆರೋಗ್ಯ ವಿಷಯ ಕುರಿತು ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ, ಪರಿಸರ ಮತ್ತು ಆರ್ಥಿಕತೆಯ ಮೇಲೆ ತಂಬಾಕಿನ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದ್ದು, ಪ್ರತಿ ವರ್ಷ ಮೇ-31 ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ.
ಇದಂನ್ನಿ ಓದಿ: ಆಡಳಿತಕ್ಕೆ ಚುರುಕು ಮುಟ್ಟಿಸಿದ ಜಿಪಂ ಸಿಇಓ |ತಾಲೂಕುಗಳಿಗೆ ಭೇಟಿ | ಕಾಮಗಾರಿ ಪರಿಶೀಲನೆ
ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯನ್ನು ರಕ್ಷಿಸಲು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಒಮ್ಮೆ ದುಶ್ಚಟಗಳಿಗೆ ದಾಸರಾದರೆ ತನ್ನ ಆರೋಗ್ಯ ಕಳೆದುಕೊಳ್ಳುವುದರ ಜತೆಗೆ ಕುಟುಂಬದ ನೆಮ್ಮದಿ ಹಾಳಾಗುತ್ತದೆ.
ವ್ಯಕ್ತಿ ತನ್ನ ಮನಸ್ಸಿನ ನಿಯಂತ್ರಣ ಕಳೆದುಕೊಳ್ಳುತ್ತಾನೆ ಇದರಿಂದ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮವುಂಟಾಗುತ್ತದೆ. ಮಾನ್ಯ ನಿರ್ದೇಶಕರು ಡಿ.ಎಸ್.ಇ.ಆರ್.ಟಿ ಬೆಂಗಳೂರುರವರ ಮಾರ್ಗದರ್ಶನದಂತೆ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ/ಕಾಲೇಜುಗಳಲ್ಲಿ ಶಿಕ್ಷಕರು ಮಕ್ಕಳಿಗೆ ಜಾಗೃತಿ ಮೂಡಿಸಲು ಕವನ, ಪೋಸ್ಟರ್ ತಯಾರಿಕೆ, ಘೋಷಣೆ ಬರವಣಿಗೆ, ನಾಟಕ ಸ್ಪರ್ಧೆಗಳನ್ನು ಆಯೋಜಿಸಬೇಕು.
ಭಾಗವಹಿಸಿದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಪದಕ ಮತ್ತು ಮೆಚ್ಚುಗೆ ಪ್ರಮಾಣ ಪತ್ರ ನೀಡಲಾಗುತ್ತದೆ. ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅತ್ಯುತ್ತಮ ಶಾಲೆಗಳನ್ನು ರಾಷ್ಟ್ರಮಟ್ಟದಲ್ಲಿ ಸನ್ಮಾನಿಸಲಾಗುತ್ತದೆ. ಆಗಸ್ಟ್-31 ಕೊನೆಯ ದಿನವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ವಯೋನಿವೃತ್ತಿ ಹೊಂದಿದ ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್‍ಗೆ ಸನ್ಮಾನ
ಹಿರಿಯ ಉಪನ್ಯಾಸಕಿ ಜ್ಞಾನೇಶ್ವರಿ ಮಾತನಾಡಿದರು.
ಬಿ.ಆರ್.ಸಿ ಶ್ರೀನಿವಾಸ್, ಬಿ.ಆರ್.ಪಿ ರುದ್ರೇಶ್, ಸುರೇಂದ್ರನಾಯಕ್, ಸುಜಾತ ಮತ್ತು ತಾಲೂಕಿನ ಎಲ್ಲ ಸಿಆರ್‌ಪಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
