CHITRADURGA NEWS | 09 SEPTEMBER 2024
ಚಿತ್ರದುರ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ವಲಸೆ ಕುರಿಗಾರರಿಗೆ ಗುರುತಿನ ಚೀಟಿ(Identity card) ವಿತರಿಸುವ ಸಂಬಂಧ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿನ 20ಕ್ಕೂ ಹೆಚ್ಚು ಕುರಿ(sheep), ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Sharana samskruthi utsava: ಶರಣ ಸಂಸ್ಕೃತಿ ಉತ್ಸವದಲ್ಲಿ ಜಯದೇವ ಕ್ರೀಡಾ ಜಾತ್ರೆ | ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
ಕುರಿಗಾಹಿಗಳು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು, ವಲಸೆ ಕುರಿಗಾರರು ಎಂಬುದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ಸೆ.30 ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶು ಚಿಕಿತ್ಸಾಲಯ, ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿ, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number