
CHITRADURGA NEWS | 13 FEBRUARY 2026
ಚಿತ್ರದುರ್ಗ: IEEE ಸ್ಟೂಡೆಂಟ್ ಬ್ರಾಂಚ್ ಹಾಗೂ ಕೇಂದ್ರ ಗ್ರಂಥಾಲಯದ ವತಿಯಿಂದ ಹಾಗೂ CSE ಮತ್ತು ECE ಸಂಶೋಧನಾ ಕೇಂದ್ರಗಳು, IQAC ಹಾಗೂ VTU ಕನ್ಸಾರ್ಟಿಯಂ ಸಹಯೋಗದಲ್ಲಿ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸರ್.ಎಂ.ವಿ ಸಭಾಂಗಣದಲ್ಲಿ IEEE Xplore ತರಬೇತಿ ಕಾರ್ಯಕ್ರಮ ಹಾಗೂ EBSCO Engineering Suite – IEEE ASPP & POP E-Resources ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಇದನ್ನೂ ಓದಿ: ನೀರಿಗಾಗಿ ಸಾವಿರಾರು ರೈತರ ಪಾದಯಾತ್ರೆ | ಸರ್ಕಾರದ ವಿರುದ್ಧ ಆಕ್ರೋಶ | ವಿಧಾನಸೌಧ ಮುತ್ತಿಗೆ ಎಚ್ಚರಿಕೆ

ಪ್ರಾಂಶುಪಾಲರಾದ ಡಾ.ಭರತ್ ಪಿ.ಬಿ ಅವರು ಮಾತನಾಡಿ, ಇತ್ತೀಚಿನ ಡಿಜಿಟಲ್ ವೇದಿಕೆಗಳ ಮೂಲಕ ಸಂಶೋಧನಾ ಸಂಪನ್ಮೂಲಗಳ ಲಭ್ಯತೆ ಸುಲಭಗೊಂಡಿರುವುದನ್ನು ಉಲ್ಲೇಖಿಸಿದರು. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಸಂಶೋಧನೆ ನಡೆಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ IEEE Xplore ಹಾಗೂ EBSCO Engineering Suite ಬಳಕೆ ಕುರಿತು ಅರಿವು ಮೂಡಿಸುವುದು ಮತ್ತು ಸಂಶೋಧನಾ ಚಟುವಟಿಕೆಗಳನ್ನು ಬಲಪಡಿಸುವುದಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ EBSCO/IEEE Xplore (East India) ಸಂಸ್ಥೆಯ ತರಬೇತಿ ವ್ಯವಸ್ಥಾಪಕರಾದ ರಾಜಕುಮಾರ್ ಮಹಾಪಾತ್ರ ಅವರು, IEEE Xplore ವೈಶಿಷ್ಟ್ಯಗಳು, ಜರ್ನಲ್‌ಗಳು, ಸಮ್ಮೇಳನ ಲೇಖನಗಳು ಹಾಗೂ ಮಾನದಂಡಗಳನ್ನು ಹೇಗೆ ಹುಡುಕುವುದು ಎಂಬುದನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಿದರು.
ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಒಂದು ಸಾವಿರ ದಿನ ಪೂರ್ಣ | ಕರಾಳ ದಿನವೆಂದು ಆಚರಿಸುವುದು ಸೂಕ್ತ | ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ
ಕೃತಕ ಬುದ್ಧಿಮತ್ತೆ ಹಾಗೂ ಯಂತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಅರವಿಂದ ಟಿ.ವಿ, ಗ್ರಂಥಪಾಲಕ ಸುನೀಲ್ ಜೆ.ಬಿ, ಪ್ರೊ.ರೂಪಾ ಎಸ್ ಸಂಯೋಜಿಸಿದರು.
ಕಾರ್ಯಕ್ರಮದಲ್ಲಿ ಪ್ರಶ್ನೋತ್ತರ ಹಾಗೂ ಕ್ವಿಜ್ ನಡೆದಿದ್ದು, ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು.
ಸಿ.ಎಸ್ ವಿಭಾಗದ ಮುಖ್ಯಸ್ಥರಾದ ಡಾ.ಕೃಷ್ಣರೆಡ್ಡಿ ಕೆ.ಅರ್, ಇ ಅಂಡ್ ಸಿ ವಿಭಾಗದ ಮುಖ್ಯಸ್ಥರಾದ ಡಾ.ಸಿದ್ದೇಶ್ ಕೆ.ಬಿ, ಕಾಲೇಜಿನ ಭೋದಕ ಮತ್ತ ಭೋದಕೇತರ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
