ಮುಖ್ಯ ಸುದ್ದಿ
ಸಂಸ್ಕಾರದ ಜೊತೆ ಸಾಕ್ಷರತೆ ಸೇರಿದರೆ ಬದುಕು ಸುಂದರ: ಎಂಎಲ್ಸಿ ಕೆ.ಸ್.ನವೀನ್

ಚಿತ್ರದುರ್ಗ ನ್ಯೂಸ್.ಕಾಂ: ಸಾಕ್ಷರತೆಯ ಬಗ್ಗೆ ನನಗೆ ಸಾಕಷ್ಟು ಆಸಕ್ತಿಯಿದೆ.. ಸಮಾಜದ ಪ್ರತಿಯೊಬ್ಬರೂ ಸಾಕ್ಷರರಾಗಬೇಕು. ಅಕ್ಷರ ಜ್ಞಾನದಿಂದ ಮಾತ್ರ ಸಶಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಜಾನುಕೊಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: ಗ್ರಾಮೀಣ ಮಕ್ಕಳ ಪಾಲಿನ ಇಂಗ್ಲೀಷ್ ಗುರು | ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ಪಡೆದ ಎಸ್.ಗುರುಮೂರ್ತಿ
ನಮ್ಮಲ್ಲಿ ಸಂಸ್ಕಾರ ಇದೆ. ಆದರೆ ಸಾಕ್ಷರತೆಯ ಕೊರತೆ ಇದೆ. ಸಂಸ್ಕಾರದ ಜೊತೆಗೆ ಸಾಕ್ಷರತೆಯೂ ಸೇರಿದರೆ ನಮ್ಮ ಬದುಕು ಸುಂದರವಾಗುತ್ತದೆ. ಸಮಾಜವೂ ಉತ್ತಮವಾಗಿರುತ್ತದೆ ಎಂದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ಶಿಕ್ಷಣ ವಂಚಿತರಾದವರಿಗೆ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆ ಕೆಲಸವನ್ನು ನಮ್ಮ ಇಲಾಖೆ ಮಾಡುತ್ತಿದೆ. ಈ ಸೌಲಭ್ಯವನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಅವರು ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಡಯಟ್ ಉಪನ್ಯಾಸಕರಾದ ವೆಂಕಟೇಶ್, ನಾಗರಾಜ್, ಜ್ಞಾನೇಶ್ವರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಸಾಕ್ಷರತಾ ಇಲಾಖೆಯ ಕಾರ್ಯಕ್ರಮ ಸಹಾಯಕ ಮಂಜುನಾಥ್, ಜಾನುಕೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷೆ ತ್ರೀವೇಣಿ, ಗ್ರಾಮ ಪಂಚಾಯಿತಿ ಸದಸ್ಯ ರಾಮಲಿಂಗಪ್ಪ, ಶಿಕ್ಷಕರಾದ ದಿನೇಶ್, ಶಿವಮೂರ್ತಿ ಇದ್ದರು.
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
