ಮುಖ್ಯ ಸುದ್ದಿ
ಇಂದಿನಿಂದ BESCOM ಹೊಸ ನಿಯಮ | 30 ದಿನಗಳಲ್ಲಿ ಬಿಲ್ ಕಟ್ಟದಿದ್ದರೆ ಕರೆಂಟ್ ಕಟ್
CHITRADURGA NEWS | 01 SEPTEMBER 2024
ಚಿತ್ರದುರ್ಗ: ವಿದ್ಯುತ್ ತಲುಪಿದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‍ಸಿ ನಿಯಮಾವಳಿ ಅನ್ವಯ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹೊಸ ನಿಯಮವನ್ನು ಬೆಸ್ಕಾಂ (BESCOM) ಸೆಪ್ಟಂಬರ್ 1 ರಿಂದ ಜಾರಿ ಮಾಡಿದೆ.
ಸೆಪ್ಟೆಂಬರ್ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‍ಮೆಂಟ್‍ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಮೀಟರ್ ರೀಡಿಂಗ್‍ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ.
ಇದನ್ನೂ ಓದಿ: ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾ ಕಾದಂಬರಿ | ಹೂತಿಟ್ಟ ಚಿನ್ನಕ್ಕಾಗಿ ಹುಡುಕಾಟ
ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್ ಮಾಪನ ಮಾಡಿದ ಬಳಿಕ, ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಲೈನ್‍ಮೆನ್‍ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು.
ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‍ಮೆನ್‍ಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.
ಇದನ್ನೂ ಓದಿ: ಸಂಸದ ಗೋವಿಂದ ಕಾರಜೋಳ ಅವರ ಹೊಸ ಕಚೇರಿ ಹೇಗಿದೆ ಗೊತ್ತಾ
ವಿದ್ಯುತ ಬಿಲ್ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ.
ಇದನ್ನೂ ಓದಿ: ಸೇನೆಯಿಂದ ನಿವೃತ್ತಿ ಹೊಂದಿ ಬರುತ್ತಿರುವ ಯೋಧನ ಸ್ವಾಗತಕ್ಕೆ ಅದ್ದೂರಿ ಸಿದ್ಧತೆ
ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.
ಗ್ರಾಹಕರಿಗೆ ವಿಶೇಷ ಸೂಚನೆ
ಆನ್‍ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸಿದ ಸಂದರ್ಭದಲ್ಲಿ ಕೆಲವೊಮ್ಮೆ ಬೆಸ್ಕಾಂ ಸಾಫ್ಟ್‍ವೇರ್‍ನಲ್ಲಿ ವಿವರ ನಮೂದಾಗದೇ ಇದ್ದಾಗ, ಬಾಕಿ ತೋರಿಸುವ ಸಾಧ್ಯತೆ ಇರುತ್ತದೆ.
ಇದನ್ನೂ ಓದಿ: ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಸಲ್ಲಿಕೆ ಅವಧಿ ಸೆ.9ರವರೆಗೆ ವಿಸ್ತರಣೆ
ಇಂಥ ಸಂದರ್ಭದಲ್ಲಿ ವಿದ್ಯುತ್ ಕಡಿತಕ್ಕೆ ಮುಂದಾದರೆ, ಸಿಬ್ಬಂದಿಗೆ ಬಿಲ್ ರಸೀದಿ ತೋರಿಸುವುದರಿಂದ ವಿದ್ಯುತ್ ಕಡಿತ ಮಾಡಲಾಗುವುದಿಲ್ಲ. ಹಾಗಾಗಿ, ನಮ್ಮ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಲಾಗಿದೆ.