
CHITRADURGA NEWS | 03 DECEMBER 2025
ಚಿತ್ರದುರ್ಗ: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಮಾತು ಚರ್ಚೆಯಲ್ಲಿದೆ, ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ರವರನ್ನು ಬದಲಾವಣೆ ಮಾಡುವುದಾದರೆ ನಮ್ಮ ಛಲವಾದಿ ಸಮುದಾಯದ ಮುಖಂಡರಾದ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಚಿತ್ರದುರ್ಗದ ಛಲವಾದಿ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಟ್ರ್ಯಾಕ್ಟರ್ ಟ್ರಾಲಿಗೆ ರಿಪ್ಲೆಕ್ಟರ್ ಅಳವಡಿಕೆ ವಿಚಾರ | RTO ಬಗ್ಗೆ ಅಸಮಧಾನ
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಛಲವಾದಿ ಸಮುದಾಯದ ಮುಖಂಡರು, ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಸಿ.ನಿರಂಜನಮೂರ್ತಿ ಮಾತನಾಡಿ, ಪರಮೇಶ್ವರರವರು ಕಾಂಗ್ರೆಸ್ ಪಕ್ಷಕ್ಕಾಗಿ ಪರಿಶ್ರಮವನ್ನು ಹಾಕಿದ್ದಾರೆ, ಕಳೆದ ಸಾರಿ ರಾಜ್ಯದಲ್ಲಿ ಪಕ್ಷ ಆಧಿಕಾರಕ್ಕೆ ಬರಲು ಅವರ ಶ್ರಮವೂ ಸಹಾ ಇದೆ.
ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ವಿವಿಧ ರೀತಿಯ ಸಚಿವ ಸ್ಥಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವ ಅವರಿಗೆ ಇದೆ, ಅಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲಾ ಬೇರೆ ಸಮುದಾಯದವರು ಮುಖ್ಯಮಂತ್ರಿಯಾಗಿದ್ದಾರೆ. ಇದುವರೆವಿಗೂ ದಲಿತ ಸಿಎಂ ಆಗಿಲ್ಲ. ದಲಿತ ಸಿಎಂ ಆಗಬೇಕೆಂದು ಕೂಗು ಮಾತ್ರ ಇದೆ ಆದರೆ ಇದುವರೆವಿಗೂ ಆಗಿಲ್ಲ ಎಂದರು.
ಛಲವಾದಿ ಸಮುದಾಯ ಎಂದಿದ್ದರೂ ಸಹಾ ಕಾಂಗ್ರೆಸ್ ಪರವಾಗಿ ಇದೆ. ನಮ್ಮ ಮತಗಳು ಯಾವೋತ್ತು ಸಹಾ ಕಾಂಗ್ರೆಸ್‍ಗೆ. ಕಳೆದ ಬಾರಿ ನಮ್ಮ ಸಮುದಾಯ ಕಾಂಗ್ರೆಸ್ ಪರವಾಗಿ ಮತವನ್ನು ಚಲಾವಣೆ ಮಾಡಿದೆ ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ನಮ್ಮ ಸಮುದಾಯದ ಋಣ ಇದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 3 | ಯಾವ ಅಡಿಕೆಗೆ ಎಷ್ಟು ರೇಟ್
ಇದನ್ನು ತೀರಿಸಬೇಕಾದರೆ ಸಿದ್ದರಾಮಯ್ಯರವರ ಬದಲಾವಣೆಯಾಗುವುದಾದರೆ ನಮ್ಮ ಸಮುದಾಯದ ಮುಖಂಡರಾದ ಡಾ.ಜಿ.ಪರಮೇಶ್ವರರವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಪಕ್ಷದ ಹೈಕಮಾಂಡನ್ನು ಒತ್ತಾಯಿಸಿದ್ದು. ಇದರ ಬಗ್ಗೆ ರಾಜ್ಯದ ಛಲವಾದಿ ಮುಖಂಡರು ಸೇರಿ ಪಕ್ಷದ ಹೈಕಮಾಂಡನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರವಿಕುಮಾರ್, ಗುರುಮೂರ್ತಿ, ರಾಮಲಿಂಗಪ್ಪ, ಶಶಾಂಕ್ ಎನ್, ದಯಾನಂದ ಅಪ್ಪಣ್ಣ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

