By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
    ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
    8 hours ago
    Gaurasamudra Maramma Devi
    ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
    8 hours ago
    ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
    ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
    9 hours ago
    ಶ್ರೀ ಮಹರ್ಷಿ ವಾಲ್ಮೀಕಿ
    ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
    9 hours ago
    ಮುರುಘಾ ಮಠ
    ಸೆ.12ರಂದು ಕೃಷಿಮೇಳ ಹಾಗೂ ಕುಸ್ತಿಪಂದ್ಯಾವಳಿ ಪೂರ್ವಭಾವಿ ಸಭೆ
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    6 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    21 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    12 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    19 hours ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    20 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    2 days ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    2 days ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    3 days ago
Reading: ಆತ್ಮವಿಶ್ವಾಸ, ಛಲವಿದ್ದರೆ ಸಾಧನೆಗೆ ಅಂಗವಿಕಲತೆ ಅಡ್ಡಿಯಾಗುವುದಿಲ್ಲ | ನ್ಯಾ. ಎಂ.ವಿಜಯ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆತ್ಮವಿಶ್ವಾಸ, ಛಲವಿದ್ದರೆ ಸಾಧನೆಗೆ ಅಂಗವಿಕಲತೆ ಅಡ್ಡಿಯಾಗುವುದಿಲ್ಲ | ನ್ಯಾ. ಎಂ.ವಿಜಯ್

News Desk Chitradurga News
Last updated: 25 November 2025 19:53
News Desk Chitradurga News
10 months ago
Share
ವಿಕಲಚೇತನರ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ
SHARE

CHITRAUDRGA NEWS | 25 NOVEMBER 2025

ಚಿತ್ರದುರ್ಗ: ಆತ್ಮವಿಶ್ವಾಸ ಹಾಗೂ ಛಲವಿದ್ದಲ್ಲಿ ಅಂಗವಿಕಲ ನ್ಯೂನತೆಗಳು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.

ಇದನ್ನೂ ಓದಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನ.27 ರಿಂದ 29 ರವರೆಗೆ

ಮಂಗಳವಾರ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ 2025ರ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ನಂತರ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾಧನೆಗೆ ಅಂಗವಿಕಲತೆ ಹಾಗೂ ನ್ಯೂನತೆಗಳು ಅಡ್ಡಿಯಾಗುವುದಿಲ್ಲ. ಬದಲಾಗಿ ನಮ್ಮಲ್ಲಿ ಆತ್ಮವಿಶ್ವಾಸ ಮತ್ತು ಸಾಧಿಸುವ ಛಲವಿದ್ದಲ್ಲಿ ಸಾಧನೆಯ ಹಾದಿ ಸುಲಭವಾಗುತ್ತದೆ. ವಿಕಲಚೇತನರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹತ್ತು ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ವಿಕಲಚೇತನರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿದೆ. 

ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಅಂಗವಿಕಲರಿಗೆ ಹಲವು ಯೋಜನೆಗಳಿವೆ. ವಿಶೇಷವಾಗಿ ವಿಕಲಚೇತನರ ಪ್ರಕರಣಗಳನ್ನು ನ್ಯಾಯಾಲಯವೇ ವೈಯಕ್ತಿಕವಾಗಿ ದಾಖಲಿಸಿಕೊಂಡು ಶೀಘ್ರವಾಗಿ ನ್ಯಾಯವನ್ನು ಒದಗಿಸುವ ಕೆಲಸವನ್ನು ಮಾಡುತ್ತಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತಾಲ್ಲೂಕು ಮಟ್ಟದಿಂದ ಸುಪ್ರಿಂ ಕೋರ್ಟ್‍ವರೆಗೂ ಉಚಿತ ಕಾನೂನು ಸಲಹೆ ಮತ್ತು ನೆರವಿಗೆ ವಕೀಲರನ್ನು ನೇಮಿಸಿ ಸೇವೆಯನ್ನು ನೀಡುತ್ತಿದೆ. 

ಇದನ್ನೂ ಓದಿ: ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಮನೆ ನವೀಕರಣ | ರೂ.1.20 ಕೋಟಿ ವೆಚ್ಚದಲ್ಲಿ ಪಾರಂಪರಿಕ ರೂಪದ ಸ್ಪರ್ಶ | ಕಾಮಗಾರಿ ಪ್ರಗತಿ ವೀಕ್ಷಿಸಿದ ಡಿಸಿ

ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಗ್ಗೆ 15 ಜನರ ತಂಡವಿದೆ. ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ವಿಕಲಚೇತನರು ಕಾನೂನು ಸೇವಾ ಪ್ರಾಧಿಕಾರಕ್ಕೆ ಸಂಪರ್ಕಿಸಿ ಉಚಿತವಾಗಿ ಕಾನೂನು ಸಲಹೆ ಮತ್ತು ಸೇವೆಯನ್ನು ಪಡೆಯಬಹುದು. ಎಲ್ಲಾ ತಾಲ್ಲೂಕು ಮಟ್ಟದ ಮಕ್ಕಳಿಗೂ ಸಹ ಇಂತಹ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಯ ಪ್ರೋತ್ಸಹ ಸಿಗುವಂತಾಗಲಿ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯ್ ಕುಮಾರ್ ಮಾತನಾಡಿ ಕ್ರೀಡಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೇಹ ಮತ್ತು ಮನಸ್ಸು ಶಾಂತತೆಯನ್ನು ಕಾಪಾಡಿಕೊಳ್ಳುತ್ತದೆ. ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಅಂಧ ವಿದ್ಯಾರ್ಥಿಗಳಿಗೆ ಕ್ರೀಡೆಯನ್ನು ಈಗಾಗಲೇ ನಡೆಸಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ಮುಂದಿನ ದಿನಗಳಲ್ಲಿ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ಮಾತನಾಡಿ ವಿಕಲಚೇತನರು ಯಾವುದೇ ಕೇತ್ರದಿಂದ ಅವಕಾಶ ವಂಚಿತರಾಗಬಾರದು, ಸಿಕ್ಕಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಮಾದರಿ ವ್ಯಕ್ತಿಗಳಾಬೇಕು ಎಂದು ಹೇಳಿದ ಅವರು ಎಲ್ಲಾ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು. 

ಇದನ್ನೂ ಓದಿ: ಹೊಳಲ್ಕೆರೆಯಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಚಿಂತನೆ

ಸ್ಥಳಿಯ ಗ್ರಾಮ ಪಂಚಾಯತ್ ಅಡಿ ಅಧಿಕಾರಿಗಳ ಮೂಲಕ ವಿಶೇಷವಾಗಿ ಅಂಗವಿಕಲರಿಗೆ ಮಾಹಿತಿಯನ್ನು ಒದಗಿಸುವ ಕೆಲಸವಾಗುತ್ತಿದೆ. ಸರ್ಕಾರ ವಿಕಲಚೇತನರಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೆ ತಂದು ಶ್ರಮಿಸುತ್ತಿದೆ. ವಿಕಲಚೇತನರಿಗೆ ಶೇ 5% ರಷ್ಟು ಮೀಸಲಾತಿಯನ್ನು ನಿಗದಿ ಮಾಡಿದೆ. ಎಲ್ಲವನ್ನು ಉಪಯೋಗಿಸಿಕೊಂಡು ಮುನ್ನೆಲೆಗೆ ಬರಬೇಕೆಂದು ಹೇಳಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಾಸ್ತಾವಿಕ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 

ಆರೋಗ್ಯ ತಪಾಸಣೆ ಶಿಬಿರಗಳು, ಶಾಲಾ ಕಾಲೇಜುಗಳಲ್ಲಿ ಹಾಗೂ ವಿಕಲಚೇತನರಿಗೆ ಇಲಾಖೆಯಲ್ಲಿ ಬರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಅರಿವನ್ನು ಮೂಡಿಸಬೇಕೆನ್ನುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕ್ರೀಡಾ ವಿಭಾಗದಲ್ಲಿ ವಿಕಲಚೇತನರು ಯಾವುದರಲ್ಲಿಯೂ ಕಡಿಮೆ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಾಧನೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ರಾಷ್ಟ್ರಮಟ್ಟದ ಕಬಡ್ಡಿ ತಂಡಕ್ಕೆ ಎಸ್.ಆರ್.ಯಶಸ್ ಆಯ್ಕೆ

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ಎಂ.ನೆಲವಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ದೈಹಿಕ ಶಿಕ್ಷಕ ಆರ್.ಉಮ್ಮೆಸಲ್ಮಾ, ಕರ್ನಾಟಕ ರಾಜ್ಯ ಅಂಗವಿಕಲರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಶ್ರೀನಿವಾಸ ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:achievementChitradurgaChitradurga newsDisabilityಅಂಗವಿಕಲತೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾಧನೆ
Share This Article
Facebook Email Print
Previous Article ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಮನೆ ನವೀಕರಣ | ರೂ.1.20 ಕೋಟಿ ವೆಚ್ಚದಲ್ಲಿ ಪಾರಂಪರಿಕ ರೂಪದ ಸ್ಪರ್ಶ | ಕಾಮಗಾರಿ ಪ್ರಗತಿ ವೀಕ್ಷಿಸಿದ ಡಿಸಿ
Next Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ | ಆಕ್ಷೇಪಣೆಗಳಿಗೆ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
ಮುಖ್ಯ ಸುದ್ದಿ
Gaurasamudra Maramma Devi
ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
ಮುಖ್ಯ ಸುದ್ದಿ
ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
ಮುಖ್ಯ ಸುದ್ದಿ
ಶ್ರೀ ಮಹರ್ಷಿ ವಾಲ್ಮೀಕಿ
ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up