CHITRADURGA NEWS |03 MARCH 2026
ಚಿತ್ರದುರ್ಗ: ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್.ಡಿ.ಪುರ ದೇವಸ್ಥಾನದ ಬಾಗಿಲು ಬಂದ್
ಕರ್ನಾಟಕ ಸರ್ಕಾರ 56432 ಹುದ್ದೆಗಳ ಭರ್ತಿಗೆ ಮುಂದಿನ 30 ದಿನಗಳಲ್ಲಿ ಪ್ರಕ್ರಿಯೆ ಆರಂಭಿಸುವುದಾಗಿ ಪ್ರಕಟಿಸಿದೆ. ಆದರೆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡದೇ ಹೊರೆತು ಈ ಹುದ್ದೆಗಳನ್ನು ಭರ್ತಿ ಮಾಡಬಾರದು.
ಒಳ ಮೀಸಲಾತಿ ಜಾರಿ ಮಾಡದೆ ಈ ಹುದ್ದೆಗಳನ್ನು ಭರ್ತಿ ಮಾಡಿದರೆ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಸಾವಿರಾರು ಯುವ ಜನತೆ ಹುದ್ದೆಗಳನ್ನು ಪಡೆಯಲು ಆಗುವುದಿಲ್ಲ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗುವವರೆಗೂ ಹುದ್ದೆಗಳ ಭರ್ತಿ ಮಾಡುವುದನ್ನು ತಡೆ ಹಿಡಿಯುವಂತೆ ಸರ್ಕಾರವನ್ನು ಆಗ್ರಹಿಸಿದರು.
ಒಳ ಮೀಸಲಾತಿಯನ್ನು ಜಾರಿ ಮಾಡಲು ನ್ಯಾಯಾಲಯ ಆಯಾ ರಾಜ್ಯಗಳಿಗೆ ಅಧಿಕಾರವನ್ನು ನೀಡಿದ ಹಿನ್ನಲೆಯಲ್ಲಿ ರಾಜ್ಯ ಸಕಾರ ಆಯೋಗವನ್ನು ರಚನೆ ಮಾಡಿ ಅದರಿಂದ ವರದಿಯನ್ನು ತರಿಸಿಕೊಂಡು ಬಹಳ ದಿನಗಳಾದರೂ ಸಹಾ ಅದನ್ನು ಜಾರಿ ಮಾಡದೆ ಕಾಂಗ್ರೆಸ್ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ.
ಇದನ್ನೂ ಓದಿ: ಮೀಸಲಾತಿ ಕಡಿತದ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ದ್ರೋಹ
ಇದರಿಂದ ಬೇಸತ್ತ ಮಾದಿಗ ಸಮುದಾಯದವರು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಆಗಮಿಸಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರವರ ಭಾವಚಿತ್ರ ಹರಿದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿ, ಮಾದಿಗ ಸಮುದಾಯದ ಸಚಿವರಾದ ಹೆಚ್.ಸಿ.ಮಹದೇವಪ್ಪ ಭಾವಚಿತ್ರ ಹರಿದ ಮಾದಿಗ ಸಮುದಾಯದ ಮುಖಂಡರು ಸಿ.ಎಂ.ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್, ಹೆಚ್.ಸಿ. ಮಹದೇವಪ್ಪ ಪ್ರಿಯಾಂಕ ಖರ್ಗೆಯ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಚೇರಿ ಬಳಿಯ ಫ್ಲೆಕ್ಸ್ ಹರಿದು ಆಕ್ರೋಶ ವ್ಯಕ್ತಪಡಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
