ಲೋಕಸಮರ 2024
ಬಿಜೆಪಿ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ | ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ | ಬಿ.ಎನ್ ಚಂದ್ರಪ್ಪ

CHITRADURGA NEWS | 30 MARCH 2024
ಚಿತ್ರದುರ್ಗ: ಬಿಜೆಪಿ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಹೊಳಲ್ಕೆರೆ ಶಾಸಕರ ಕ್ಷಮೆಗೆ ಸ್ವಕ್ಷೇತ್ರದವರ ಪಟ್ಟು

ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿ, ಕನಕ, ಕುಂಚಿಟಿಗ ಮಠ, ಬೆಲಗೂರು ಆಂಜನೇಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಮಾತನಾಡಿದವರು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನ ನೀಡುವ ಮೂಲಕ ಕರ್ನಾಟಕದ ಮತದಾರರು ಪ್ರಭುದ್ಧತೆ ಮೆರೆದಿದ್ದು, ಲೋಕಸಭಾ ಚುನಾವಣೆಯಲ್ಲಿ ಈ ಫಲಿತಾಂಶ ಮರುಕಳಿಸಲಿದೆ ಎಂದರು.
ಕರ್ನಾಟಕ ರಾಜ್ಯದ ಜನರ ಚಿಂತನೆ, ಚುನಾವಣೆಯಲ್ಲಿ ಕೈಗೊಳ್ಳುವ ನಿರ್ಧಾರ ಇಡೀ ದೇಶಕ್ಕೆ ಮಾದರಿಯಾಗಿದೆ, ಎಷ್ಟು ಹಣದ ಹೊಳೆ ಹರಿಸಿ, ಜಾತಿ, ಧರ್ಮ ಮುಂದಿಟ್ಟುಕೊಂಡು ಚುನಾವಣೆ ನಡೆಸಿದರು ಬಿಜೆಪಿ ಪಕ್ಷಕ್ಕೆ ಮಣೆ ಹಾಕದೆ, ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಬೆಂಬಲ ನೀಡುತ್ತಿದ್ದಾರೆ.
ಇದನ್ನೂ ಓದಿ: ನಾಲ್ವರು ಶಿಕ್ಷಕರು ಅಮಾನತು | ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಕರ್ತವ್ಯ ಲೋಪ
ಹಳ್ಳಿಗಳಿಗೆ ಹೋದ ಸಂದರ್ಭದಲ್ಲಿ ಜನ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಬಹಳಷ್ಟು ಅನುಕೂಲ ಆಗಿದೆ ಸ್ವಾಮಿ ಎಂದು ಹೇಳುತ್ತಾರೆ. ಈ ಜನರ ಅಭಿಪ್ರಾಯ ಲೋಕಸಭಾ ಚುನಾವಣೆ ಫಲಿತಾಂಶದಲ್ಲೂ ಪ್ರಕಟಗೊಳ್ಳಲಿದೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಲಿದೆ ಎಂದರು.
ಚಿತ್ರದುರ್ಗ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂಬುದಕ್ಕೆ ಎಂಟು ಕ್ಷೇತ್ರದಲ್ಲಿ ಏಳು ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ, ಲೋಕಸಭಾ ಚು ನಾವಣೆಯಲ್ಲೂ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಬಿಜೆಪಿ ಪಕ್ಷದವರೇ ಹೇಳುತ್ತಿದ್ದಾರೆ.
ಇದನ್ನೂ ಓದಿ: ಬೀದಿಗೆ ಬಿದ್ದ ಹಾಲಿ-ಮಾಜಿ ಶಾಸಕರ ವಾಕ್ಸಮರ
ಕಾಂಗ್ರೆಸ್ ಪಕ್ಷದಲ್ಲಿ 25 ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರೂ ಎಲ್ಲರೂ ಒಗ್ಗೂಡಿ ಪಕ್ಷದ ಗೆಲುವಿಗೆ ಈಗಾಗಲೇ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ.
ಸಂಸದರಾದವರು ಎಲ್ಲ ಶಾಸಕರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕೆಂಬುದು ನಾನು ಸಂಸದನಾಗಿದ್ದ ಸಂದರ್ಭದಲ್ಲಿ ಸಾಬೀತುಪಡಿಸಿದ್ದೇನೆ. ಯಾವುದೇ ಯೋಜನೆ, ಅಭಿವೃದ್ಧಿ ಕಾರ್ಯ ಕೈಗೊಳ್ಳುವಾಗ ನಾವೆಲ್ಲರೂ ಒಗ್ಗೂಡಿ ಸಭೆ ನಡೆಸಿ ಒಮ್ಮತದಿಂದ ಜಿಲ್ಲೆ ಅಭಿವೃದ್ಧಿಗೆ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದೆವು,
ಈ ರೀತಿಯ ನಮ್ಮ ನಡೆ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಕೈ ಹಿಡಿದಿದೆ, ಅಭ್ಯರ್ಥಿಯಾದ ನನಗಿಂತಲೂ ಮುಂಚಿತವಾಗಿ ಎಲ್ಲ ಶಾಸಕರು ಮುಖಂಡರು ಪಕ್ಷದ ಪರ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ, ದಾಖಲೆ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂಬ ಅವರ ನಿರ್ಧಾರ, ಶಮ ನಿಜಕ್ಕೂ ಮಾದರಿಯಾಗಿದೆ ಎಂದರು.
ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರತಿಭಟಿಸಿದವರ ಮೇಲೆ ಎಫ್‍ಐಆರ್
ಸಾಣೆಹಳ್ಳಿ ಮಠದ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾಗಿನೆಲೆ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಹಾಮಠದ ಡಾ.ಶ್ರೀ ಶಾಂತವೀರ ಸ್ವಾಮೀಜಿ ಇವರುಗಳು ಬಿ.ಎನ್. ಚಂದ್ರಪ್ಪ ಅವರಿಗೆ ಆಶೀರ್ವಾದಿಸಿ ಸನ್ಮಾನಿಸಿದರು.
ಈ ವೇಳೆ ಜವಳಿ ನಿಗಮದ ಮಾಜಿ ಅಧ್ಯಕ್ಷ ಗೋ, ತಿಪ್ಪೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗಿರೀಶ್, ಮುಖಂಡರಾದ ನಟರಾಜ್, ಮಲ್ಲಿಕಾರ್ಜುನ್, ಶ್ರೀಧರ್, ಗಿರೀಶಣ್ಣ, ಓಂಕಾರಪ್ಪ, ರಂಗನಾಥ್ ಅನಿವಾಳ, ಪ್ರಶಾಂತ್ ಸೇರಿದಂತೆ ಇತರರು ಇದ್ದರು.
