ಮುಖ್ಯ ಸುದ್ದಿ
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಉದ್ಘಾಟನೆ | ವರಕವಿ ದ.ರಾ.ಬೇಂದ್ರೆ ಸ್ಮರಣೆ | ಸಂಜೆ 5ಕ್ಕೆ ಕಾರ್ಯಕ್ರಮ

CHITRADURGA NEWS | 22 FEBRAURY 2025
ಚಿತ್ರದುರ್ಗ: ಇಂದು (ಫೆ.22 ಶನಿವಾರ) ಸಂಜೆ 5 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿರುವ ಪತ್ರಿಕಾ ಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಚಿತ್ರದುರ್ಗ ಜಿಲ್ಲಾ ಘಟಕದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದೇ ವೇಳೆ ವರಕವಿ ದ.ರಾ.ಬೇಂದ್ರ ಅವರ ನಾಕುತಂತಿ ಕೃತಿಗೆ 60 ವರ್ಷ ತುಂಬಿರುವುದು ಹಾಗೂ ಜ್ಞಾನಪೀಠ ಪ್ರಶಸ್ತಿ ಲಭಿಸಿ 50 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಸ್ಮರಣಾರ್ಥ ಉಪನ್ಯಾಸ ಇದೆ.

ಇದನ್ನೂ ಓದಿ: ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ
ಕಾರ್ಯಕ್ರಮವನ್ನು ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಡಾ.ಸಿಬಂತಿ ಪದ್ಮನಾಭ ಕೆ.ವಿ ಉದ್ಘಾಟಿಸಲಿದ್ದಾರೆ.
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಾ.ಎಸ್.ಎನ್.ಹೇಮಂತರಾಜು ದ.ರಾ.ಬೇಂದ್ರ ಅವರ ಕುರಿತು ಉಪನ್ಯಾಸ ನೀಡಲಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರೊ.ಜಿ.ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಯಳನಾಡು ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
