
CHITRADURGA NEWS | 23 AUGUST 2026
ಹೊಸದುರ್ಗ: ತಾಲೂಕಿನ ಕಸಬಾ ಹೋಬಳಿಯ ಕಬ್ಬಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಉದ್ಘಾಟನೆ ಹಾಗೂ ಕಲಶಾರೋಹಣ ಕಾರ್ಯಕ್ರಮ ಭಕ್ತಿ-ಶ್ರದ್ಧೆಯಿಂದ ನೆರವೇರಿತು.
ಇದನ್ನೂ ಓದಿ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹೊಸದುರ್ಗ ಕುಂಚಟಿಗ ಮಠದ ಜಗದ್ಗುರು ಡಾ. ಶಾಂತವೀರ ಮಹಾಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಗ್ರಾಮೀಣ ಬದುಕಿನಲ್ಲಿ ದೈವ ಹಾಗೂ ಧಾರ್ಮಿಕ ಆಚರಣೆಗಳು ಅವಿಭಾಜ್ಯ ಅಂಗವಾಗಿವೆ. ಧಾರ್ಮಿಕ ಕೇಂದ್ರಗಳು ಭಕ್ತಿ, ನಂಬಿಕೆ ಹಾಗೂ ಸಾಮಾಜಿಕ ಸಾಮರಸ್ಯವನ್ನು ಗಟ್ಟಿಗೊಳಿಸುತ್ತವೆ. ದೇವಾಲಯ ನಿರ್ಮಾಣದ ಜತೆಗೆ ಮಕ್ಕಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಯಶಸ್ವಿಯಾಗಲಿ ಎಂದು ಆಶಿಸಿದರು.
ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಮಾತನಾಡಿ, ಕಬ್ಬಳ ತಮ್ಮ ತಾಯಿಯ ಮನೆ ಹಾಗೂ ಜನಿಸಿದ ಊರಾಗಿದ್ದು, ಇಲ್ಲಿನ ಜನರು ಶ್ರಮಜೀವಿಗಳಾಗಿದ್ದಾರೆ. ಸನಾತನ ಧಾರ್ಮಿಕ ಪರಂಪರೆಯಲ್ಲಿ ದೇವಾನುದೇವತೆಗಳಿಗೆ ವಿಶೇಷ ಸ್ಥಾನವಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿ, ಕಬ್ಬಳದ ಕಂಬದ ನರಸಿಂಹ ಸ್ವಾಮಿ ಹಾಗೂ ಎನ್.ಜಿ.ಹಳ್ಳಿಯ ಮುತ್ತಿನ ಕುಮಾರಿ ದೇವಿ ಸೇರಿದಂತೆ ಹಲವು ದೈವಗಳು ಭಕ್ತರ ನಂಬಿಕೆಯ ಕೇಂದ್ರಗಳಾಗಿವೆ. ಗ್ರಾಮಸ್ಥರು ಒಗ್ಗಟ್ಟಿನಿಂದ ದೇವಾಲಯ ನಿರ್ಮಾಣ ಕಾರ್ಯವನ್ನು ಕೇವಲ ಒಂದು ವರ್ಷದಲ್ಲಿ ಪೂರ್ಣಗೊಳಿಸಿರುವುದು ಶ್ಲಾಘನೀಯ ಎಂದರು.
ಇದನ್ನೂ ಓದಿ: ಆ.25ರಂದು ಚಿತ್ರದುರ್ಗದಲ್ಲಿ ನೇರ ನೇಮಕಾತಿ ಸಂದರ್ಶನ
ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಾಜಿ ಜಿ.ಪಂ. ಸದಸ್ಯ ಗುರುಸ್ವಾಮಿ, ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ. ಮಲ್ಲಿಕಾರ್ಜುನ ಹಾಗೂ ಸದಸ್ಯರು, ಗ್ರಾಮಸ್ಥರು, ಮುಖಂಡರು ಮತ್ತು ಭಕ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಪೂಜೆ, ಹೋಮ-ಹವನ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

