
CHITRADURGA NEWS | 15 NOVEMBER 2024
ಹೊಳಲ್ಕೆರೆ: ತಾಲ್ಲೂಕಿನ ಹೆಚ್.ಡಿ ಪುರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆ ಸುಮಿತ್ರಮ್ಮ, ಉಪಾಧ್ಯಕ್ಷೆ ಸುಧಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಮಾಜಿ ಸಚಿವ ಹೆಚ್.ಆಂಜನೇಯ(H.ANJANEYA) ಭಾಗವಹಿಸಿ ಶುಭ ಕೋರಿದ್ದಾರೆ.
ಕ್ಲಿಕ್ ಮಾಡಿ ಓದಿ: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯ ಕೊಲೆ | ಗುಂಡಿ ಹಳ್ಳದಲ್ಲಿ ಘಟನೆ | ತನಿಖೆಗೆ ಮುಂದಾದ ಪೊಲೀಸರು

ನಂತರ ಮಾತನಾಡಿದ ಅವರು, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆ ಹಾಗೂ ಗ್ರಾಮದ ಸ್ವಚ್ಛತೆ ಹಾಗೂ ಸರ್ಕಾರದಿಂದ ಬರುವ ಯೋಜನೆಗಳನ್ನು ಜನರಿಗೆ ಒದಗಿಸುವ ಪ್ರಯತ್ನ ಮಾಡಬೇಕೆಂದು ಸಲಹೆ ನೀಡಿದರು.
ಕ್ಲಿಕ್ ಮಾಡಿ ಓದಿ: ಬಬ್ಬೂರಿನಲ್ಲಿ ಎರಡು ದಿನ ಕೃಷಿಮೇಳ
ಈ ಸಂದರ್ಭದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಡಿ.ರಂಗಯ್ಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಡಿ.ಕೆ.ಶಿವಮೂರ್ತಿ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಕಿರಣ್ ಕುಮಾರ್, ಹೆಚ್.ಡಿ ಪುರ ಗ್ರಾ.ಪಂ ವ್ಯಾಪ್ತಿಯ ಮುಖಂಡರಾದ, ಶೇಷಾದ್ರಿ, ದಿವಾಕರ್, ನೆಲ್ಲಿಕಟ್ಟೆ ಅಜ್ಜಣ್ಣ ಸೇರಿದಂತೆ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
