
CHITRADURGA NEWS | 17 OCTOBER 2025
ಚಿತ್ರದುರ್ಗ: ಕರ್ನಾಟಕ ಸರ್ಕಾರದ ಭೋವಿ ಅಭಿವೃದ್ದಿ ನಿಗಮಕ್ಕೆ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮೈಸೂರಿನ ನೇರಲಗುಂಟೆ ಎಂ.ರಾಮಪ್ಪ ಪದಗ್ರಹಣ ಹಾಗೂ ಧಾರ್ಮಿಕ ಪೂಜಾ ಕಾರ್ಯಕ್ರಮವು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಿತು.
ಇದನ್ನೂ ಓದಿ: ಚಿತ್ರದುರ್ಗ – ತುಮಕೂರು ರೈಲು ಮಾರ್ಗ | ಹಳಿ ಪರಿಶೀಲಿಸಿದ ಸಚಿವ ಸೋಮಣ್ಣ | ಒಂದು ವರ್ಷದಲ್ಲಿ ಚಾಲನೆ
ಎಂ.ರಾಮಪ್ಪ ಅಧ್ಯಕ್ಷರಾಗಿ ಪದಗ್ರಹಣ ಮಾಡಿ ಮಾತನಾಡಿದ, ನಾನು ಬಡತನದ ಹಿನ್ನೆಲೆಯಿಂದ ಬಂದಿದ್ದೇನೆ. ಬಡವರ ಕಷ್ಚಕಾರ್ಪಣ್ಯಗಳು ಹತ್ತಿರದಿಂದ ಅನುಭವಿಸಿದ್ದೇನೆ. ಕಟ್ಟಕಡೆಯ ಭೋವಿ ವ್ಯಕ್ತಿಯನ್ನು ಗುರುತಿಸಿ ಅಭಿವೃದ್ಧಿಯ ಕಡೆ ಕರೆದುಕೊಂಡು ಬರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ರಾಜ್ಯ ಪ್ರವಾಸ ಮಾಡಿ ಸಮಾಜದ ಸ್ಥಿತಿಗಳನ್ನು ಸ್ವತಃ ಅರ್ಥೈಸಿಕೊಂಡು ಸ್ಪಂದಿಸುತ್ತೇನೆ. ಬಡವರು ಮುಗ್ದ ಜನರು ಯಾರ ಶಿಫಾರಸ್ಸು ಪಡೆಯದೆ ದಲ್ಲಾಳಿಗಳನ್ನು ಸಂಪರ್ಕಿಸಿದೆ ನೇರವಾಗಿ ನಿಗಮಕ್ಕೆ ಭೇಟಿ ನೀಡಿ, ಸಂವಿಧಾನದ ಅಡಿಯಲ್ಲಿ ಶಾಸಕರ, ಸಚಿವರು ಗುರುತಿಸುವ ಅರ್ಹ ವ್ಯಕ್ತಿಗಳಿಗೂ ಹಾಗೂ ನಿರ್ಲಕ್ಷ್ಯಕ್ಕೆ ಒಳಪಟ್ಟ ಉತ್ಸಾಹಿ ಯುವಕರಿಗೆ ಸ್ಪಂದಿಸುವ ಕಾರ್ಯಕ್ಕೆ ಮೊದಲನೇ ಆದ್ಯತೆ ನೀಡುತ್ತೇನೆ ಎಂದರು.
ನಿಗಮಕ್ಕೆ ನೇಮಕಗೊಳ್ಳಲು ಕಾರಣೀಭೂತರಾದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಚಿವ ಶಿವರಾಜ ತಂಗಡಗಿಯವರಿಗೆ ಗೌರವ ತರುವಂತೆ ಘನವ್ಯಕ್ತಿತ್ವದಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ | ಸಾಧಕರಿಗೆ ಸನ್ಮಾನ | ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹೊಸದುರ್ಗ ಶಾಸಕ ಗೋವಿಂದಪ್ಪ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಗುಂಡ್ಲುಪೇಟೆಯ ಗಣೇಶ್ ಪ್ರಸಾದ್, ನಂಜನಗೂಡಿನ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಬಸವರಾಜ್, ಭೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಮ ಸೇರಿದಂತೆ ಇತರರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
