ಹೊಳಲ್ಕೆರೆ
ನಂದನಹೊಸೂರಿನಲ್ಲಿಂದು ದೇಗುಲ ಪ್ರಾರಂಭೋತ್ಸವ | ಕರಿಯಮ್ಮ ದೇವಿಯ ನೂತನ ದೇವಸ್ಥಾನ | ವಿಗ್ರಹ ಪ್ರತಿಷ್ಠಾಪನೆ
CHITRADURGA NEWS | 13 FEBRUARY 2024
ಚಿತ್ರದುರ್ಗ: ಜಿಲ್ಲೆಯ ಅರೆ ಮಲೆನಾಡು ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದಲ್ಲಿ ನಿರ್ಮಿಸಿರುವ ನೂತನ ದೇವಸ್ಥಾನದ ಪ್ರಾರಂಭೋತ್ಸವದ ಸಂಭ್ರಮ ಮನೆ ಮಾಡಿದೆ.
ಗ್ರಾಮ ದೇವತೆ ಕರಿಯಮ್ಮ ದೇವಿಯ ದೇವಸ್ಥಾನದ ಪ್ರಾರಂಭೋತ್ಸವ ಹಾಗೂ ನೂತನ ವಿಗ್ರಹ ಪ್ರತಿಷ್ಠಾಪನೆ, ಗೋಪುರದ ಕಳಸಾರೋಹಣ ಸೇರಿದಂತೆ ಹಲವು ಧಾರ್ಮಿಕ ಕಾರ್ಯಗಳು ಬೆಳಗ್ಗೆಯಿಂದಲೇ ಪ್ರಾರಂಭವಾಗಿವೆ.
ಇದನ್ನೂ ಓದಿ: ತರೀಕೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ 50 ಸಾವಿರ
ಮಂಗಳವಾರ ಬೆಳಗಿನ ಜಾವ 5-20 ರಿಂದ 7-30 ರೊಳಗೆ ಬ್ರಾಹ್ಮಿ ಮುಹೂರ್ತದಲ್ಲಿ ದೇವಸ್ಥಾನದ ಪ್ರಾರಂಭೋತ್ಸವ ಹಾಗೂ ವಿಗ್ರಹ ಪ್ರತಿಷ್ಠಾಪನೆ ಜರುಗಿದವು.
ದೇವಸ್ಥಾನದ ಪ್ರಾರಂಭೋತ್ಸವದ ಅಂಗವಾಗಿ ಸೋಮವಾರ ಬೆಳಗಿನ ಜಾವ 3 ಗಂಟೆಯಿಂದ ಎಂ.ಡಿ.ಚಂದ್ರಶೇಖರಯ್ಯ ಶಾಸ್ತ್ರಿ ಅವರ ನೇತೃತ್ವದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಗಂಗಾ ಪೂಜೆ, ದುರ್ಗಿ ಹೋಮ ಮತ್ತು ಚಡಿ ಹೋಮಗಳು ನೆರವೇರಿದವು.
ಇದನ್ನೂ ಓದಿ: ನಾಯಕನಹಟ್ಟಿ ಬಂದ್‍ಗೆ ಸಂಘಟನೆಗಳ ಬೆಂಬಲ
ಇಂದು ಮಂಗಳವಾರ ಮಧ್ಯಾಹ್ನ 12-20 ರಿಂದ ದೇವಸ್ಥಾನದ ಉದ್ಘಾಟನೆ, ಕಳಸಾರೋಹಣ ನಡೆಯಲಿದೆ. ಸಂಜೆ 7 ಗಂಟೆಯಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
ದೇವಸ್ಥಾನದ ಪ್ರಾರಂಭೋತ್ಸವದ ಅಂಗವಾಗಿ ಇಂದು ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಮುರುಘಾ ಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ವಹಿಸುವರು. ಹೊಸದುರ್ಗ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಹಾಗೂ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಾನ್ನಿಧ್ಯ ವಹಿಸಲಿದ್ದಾರೆ.
ಇದನ್ನೂ ಓದಿ: ರಾಗಿ ಖರೀಧಿ ನೊಂದಣಿ ಪ್ರಾರಂಭ | ಅವಧಿ ವಿಸ್ತರಣೆಗೆ ಆಗ್ರಹ
ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಎಂ.ಬಿ.ತಿಪ್ಪೇರುದ್ರಪ್ಪ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್, ಜಿಪಂ ಮಾಜಿ ಸದಸ್ಯ ಜಿ.ಎಚ್.ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮೂಡಲಗಿರಿಯಪ್ಪ, ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಂ.ಪಿ.ಪ್ರವೀಣ್, ಎನ್.ಎಸ್.ರಮೇಶ್ ಭಾಗವಹಿಸುವರು.
ನಾಳೆ ಹೂವಿನ ಪಲ್ಲಕ್ಕಿ ಉತ್ಸವ:
ಫೆ.14 ಬುಧವಾರ ರಾತ್ರಿ 7 ಗಂಟೆಗೆ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವರುಗಳ ಹೂವಿನ ಪಲ್ಲಕ್ಕಿ ಉತ್ಸವ ಗ್ರಾಮದ ರಾಜಬೀದಿಗಳಲ್ಲಿ ನೆರವೇರಲಿದೆ.