
CHITRADURGA NEWS | 03 FEBRUARY 2026
ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಅರ್ಹ ಕ್ರೀಡಾಪಟುಗಳಿಗೆ ನೀಡಲಾಗುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಫೆಬ್ರವರಿ 10ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ವಸ್ತು ಎರಡೆರಡಾಗಿ ಕಾಣುವುದು ಕೇವಲ ಕಣ್ಣಿನ ಸಮಸ್ಯೆಯಲ್ಲ! ಈ ಅಪಾಯಕಾರಿ ಸಮಸ್ಯೆಯ ಸಂಕೇತವಾಗಿರಬಹುದಂತೆ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂದರೆ ಜನವರಿ 1 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಹಿಂದೆ ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನಾಂಕವಾಗಿತ್ತು, ಕ್ರೀಡಾಪಟುಗಳ ಹಿತದೃಷ್ಟಿಯಿಂದ ಈ ಅವಧಿಯನ್ನು 2026ರ ಫೆ.10ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಕೋಟೆಯಲ್ಲಿರುವ ಫಾಲ್ಗುಣೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಶಿವರಾತ್ರಿ
ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
