
CHITRADURGA NEWS | 15 JANUARY 2026
ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಮೆಕ್ಕೆಜೋಳಕ್ಕೆ 2150 ದರ ನಿಗಧಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2024 ರಿಂದ 31.12.2024) ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಹಧನ ನೀಡಲು ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅದರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ಜಾಲತಾಣ https://sevasindu.karnataka.gov.in ಮೂಲಕ ಜ.31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
