
CHITRADURGA NEWS | 18 FEBRUARY 2026
ಚಿತ್ರದುರ್ಗ: ಜಿಲ್ಲೆಯ ಅರ್ಹ ನವ ಕಾನೂನು ಪದವೀಧರರಿಗೆ ವಕೀಲರ ವೃತ್ತಿಯಲ್ಲಿ ಉತ್ತೇಜನ ನೀಡುವ ಉದ್ದೇಶದಿಂದ ಪ್ರತಿ ತಿಂಗಳು ರೂ.2,000 ಗಳ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬೇಸಿಗೆ ಆರಂಭ | ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಿ | ಡಿಸಿ ವೆಂಕಟೇಶ್ ಸೂಚನೆ

ಅಭ್ಯರ್ಥಿಗಳು ದಿನಾಂಕ 01.06.2024 ರಿಂದ 31.05.2025 ರ ಅವಧಿಯೊಳಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ವಕೀಲರ ವೃತ್ತಿಗೆ ನೋಂದಾಯಿಸಿಕೊಂಡಿರಬೇಕು. ಅಭ್ಯರ್ಥಿಯ ಅಥವಾ ಅವರ ಕುಟುಂಬದ ವಾರ್ಷಿಕ ಆದಾಯವು ರೂ.40,000/- ಮೀರಿರಬಾರದು. ಈ ಸಂಬ0ಧ ದ ಅರ್ಜಿಯೊಂದಿಗೆ ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.
ನೇಮಕಾತಿ ಅಧಿಸೂಚನೆ ಹಾಗೂ ಅರ್ಜಿ ನಮೂನೆ ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳು, ವಕೀಲರ ಭವನಗಳಲ್ಲಿ ದೊರಕುತ್ತವೆ. ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಮಾರ್ಚ್ 17 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.
ಇದನ್ನೂ ಓದಿ: SC, ST ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನ್ಯಾಯ | ಮಾಜಿ ಸಂಸದ ಉಗ್ರಪ್ಪ
ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದವರು ಅಥವಾ ಸೇವೆಯಿಂದ ವಜಾಗೊಂಡವರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಲ್ಲ. ಈಗಾಗಲೇ ಸರ್ಕಾರದ ಬೇರೆ ಯಾವುದೇ ಯೋಜನೆಯಡಿ ಇಂತಹ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣವಾಸುದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
