
CHITRADURGA NEWS | 24 August 2025
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ವೇದಾವತಿ ಮೂಲಕ ನೀರು ಹರಿದು ಬರುತ್ತಿದೆ.
ಇದನ್ನೂ ಓದಿ: ಸತ್ಯಮೇವ ಜಯತೆ | ಸಚಿವ ಡಿ.ಸುಧಾಕರ್
ಆಗಸ್ಟ್ 24 ಭಾನುವಾರ ಬೆಳಗ್ಗೆ 8 ಗಂಟೆಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ ಬರೋಬ್ಬರಿ 1925 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
130 ಅಡಿ ಎತ್ತರದ ಜಲಾಶಯದಲ್ಲಿ 30 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಇದೆ.ಇಂದಿನ ಜಲಾಶಯದ ಮಟ್ಟ 126.30 ಅಡಿವರೆಗೆ ನೀರು ಬಂದಿದ್ದು, ಒಟ್ಟಾರೆ 27.32 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಅಂದರೆ 2024 ಆಗಸ್ಟ್ 24 ರಂದು ಜಲಾಶಯದಲ್ಲಿ 118 ಅಡಿವರೆಗೆ ನೀರಿದ್ದು, ಒಟ್ಟು 20.78 ಟಿಎಂಸಿ ಅಡಿ ನೀರಿತ್ತು.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಇ.ಡಿ.ವಶಕ್ಕೆ
ಜಲಾಶಯಕ್ಕೆ ನೀರು ಹರಿದು ಬರುತ್ತಿರುವ ಗತಿ ಗಮನಿಸಿದಾಗ ಈ ವರ್ಷ ಕೂಡ ಜಲಾಶಯ ಭರ್ತಿ ಆಗುವ ಭರವಸೆ ಇದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

