
CHITRADURGA NEWS | 11 APRIL 2026
ಚಿತ್ರದುರ್ಗ: ಭೂ ಹೀನರಿಗೆ ಭೂಮಿ ಮತ್ತು ವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡಬೇಕೆಂಬ ನಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಮೇ.1 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ಧಿಷ್ಠಾವಧಿ ಹೋರಾಟ ನಡೆಸಲಾಗುವುದೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಖಜಾಂಚಿ ಶ್ರೀರಂಗಾಚಾರಿ ಎಚ್ಚರಿಸಿದರು.
ಇದನ್ನೂ ಓದಿ: SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ
ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿರವರು ಕಟ್ಟಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಭೂಹೀನರ ಪರವಾಗಿ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದೆ.
ಅರಣ್ಯ, ಇನಾಮ್, ಹುಲ್ಲುಬನ್ನಿ, ಗೋಮಾಳ, ಸೇಂದಿವನ ಹೀಗೆ ಹಲವಾರು ಹೆಸರಿನಲ್ಲಿ ಲಕ್ಷಾಂತರ ಎಕರೆ ಭೂಮಿಯಿದ್ದರು ಸರ್ಕಾರ ಕಾನೂನುಗಳನ್ನು ಅಡ್ಡವಿಟ್ಟು ಭೂಮಿ ಕೊಡಲು ಆಗಲ್ಲ ಎಂದು ಹೇಳುವುದು ಸರಿಯಲ್ಲ.
ಎಲ್ಲಾ ಕಾಯಿದೆಗಳ ಅಡ್ಡಿ ಆತಂಕಗಳಿಗೆ ವಿನಾಯಿತಿ ನೀಡಿ ಒನ್ ಟೈಂ ಸೆಟ್ಲಮೆಂಟ್ ಮೂಲಕ ಬಡವರಿಗೆ ತಲಾ ಎರಡು ಎಕರೆ ಜಮೀನು, ವಸತಿ ಇಲ್ಲದವರಿಗೆ ಮನೆಗಳನ್ನು ಕಟ್ಟಿಸಿಕೊಡಬೇಕು. ಬೆಳಗಾವಿಯಲ್ಲಿ ನಡೆದ ಹೋರಾಟದ ಸ್ಥಳಕ್ಕೆ ಬಂದು ನಮ್ಮ ಮನವಿಯನ್ನು ಕೇಳದಿದ್ದರೆ ವಿಧಾನಸೌಧಕ್ಕೆ ಬೀಗ ಹಾಕುವುದಾಗಿ ಹೆಚ್.ಎಸ್.ದೊರೆಸ್ವಾಮಿ ಸಿದ್ದರಾಮಯ್ಯನವರಿಗೆ ಎಚ್ಚರಿಸಿದ್ದರು. ಅವರ ಕನಸಿನಂತೆ ನಾವುಗಳು ಹೋರಾಟದಿಂದ ಹಿಂದೆ ಸರಿಯಬಾರದೆಂದು ಕರೆ ನೀಡಿದರು.
ಇದನ್ನೂ ಓದಿ: ಮೇದಾರ ಕೇತೇಶ್ವರ ಮಠಕ್ಕೆ ಕೆ.ಜಿ.ಜಗದೀಶ್ ಭೇಟಿ
ಸರ್ಕಾರ ಬಡವರಿಂದ ಭೂಮಿ ಕಸಿದುಕೊಂಡು ಉದ್ಯಮಿಗಳು, ಬಂಡವಾಳಶಾಹಿಗಳಿಗೆ ಕೊಡುತ್ತಿದೆ. ಪ್ರಧಾನಿ ಮೋದಿರವರು 1050 ಎಕರೆ ಭೂಮಿಯನ್ನು ಕೇವಲ ಒಂದು ರೂ.ಗೆ ಎಕರೆಯಂತೆ ಅದಾನಿಗೆ ಕೊಟ್ಟಿದ್ದಾರೆ. ಇನ್ನು ರಾಜ್ಯ ಸರ್ಕಾರ ಎಂಟು ನೂರು ಎಕರೆ ಜಮೀನನ್ನು ಜಿಂದಾಲ್ ಕಂಪನಿಗೆ ಕೊಟ್ಟಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.?
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ ಮಾತನಾಡಿ, ಹೆಚ್.ಎಸ್.ದೊರೆಸ್ವಾಮಿರವರ ಆಸೆಯಂತೆ ಮೇ.1 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸಿ ಬಡವರಿಗೆ ಭೂಮಿ ಮತ್ತು ಮನೆಗಳನ್ನು ಕೊಡಿಸೋಣ. ಎಲ್ಲರೂ ಹೋರಾಟದಲ್ಲಿ ಕೈಜೋಡಿಸುವಂತೆ ಮನವಿ ಮಾಡಿದರು.
ಸಮಿತಿಯ ಕಾರ್ಯದರ್ಶಿ ಹನುಮಂತಪ್ಪ ಗೋನೂರು ಮಾತನಾಡುತ್ತ ಬಡವರಿಗೆ ಭೂಮಿ ಮತ್ತು ವಸತಿರಹಿತರಿಗೆ ಮನೆಗಳನ್ನು ಸರ್ಕಾರದಿಂದ ಕೊಡಿಸಬೇಕೆಂಬುದು ನಮ್ಮ ಹೋರಾಟದ ಉದ್ದೇಶ. ಭೂಹೀನರಿಗೆ ಭೂಮಿ ಕೊಡಿಸಬೇಕೆಂಬ ಮಹದಾಸೆಯಿಟ್ಟುಕೊಂಡು ಎಚ್.ಎಸ್.ದೊರೆಸ್ವಾಮಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯನ್ನು ಹುಟ್ಟು ಹಾಕಿದರು. ನಾವುಗಳು ಮುನ್ನಡೆಸಿಕೊಂಡು ಹೋಗಬೇಕಿದೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
ಎದ್ದೇಳು ಕರ್ನಾಟಕ ಜಿಲ್ಲಾ ಮುಖಂಡ ಶಿವಕುಮಾರ್, ರಾಜಣ್ಣ ಲಕ್ಷ್ಮಿಸಾಗರ, ಈಚಘಟ್ಟದ ಕರಿಯಪ್ಪ ಮಾತನಾಡಿದರು, ಹೆಚ್.ವೆಂಕಟೇಶ್, ಅಂಜಿನಪ್ಪ, ಸಣ್ಣವೀರಪ್ಪ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
